ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪೈರೇಷನ್‌ ಬ್ಲಾಕ್ ಫೆಲೊಗಳ ಹುದ್ದೆಗೆ ಅರ್ಜಿ ಆಹ್ವಾನ

Published 3 ಫೆಬ್ರುವರಿ 2024, 15:48 IST
Last Updated 3 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ಬೀದರ್: ಕೇಂದ್ರ ಸರ್ಕಾರದ ನೀತಿ ಆಯೋಗದ ಆಸ್ಪೈರೇಷನ್‌ ಬ್ಲಾಕ್ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಜಿಲ್ಲೆಯ ಹುಮನಾಬಾದ್, ಚಿಟಗುಪ್ಪ, ಕಮಲನಗರ ಹಾಗೂ ಔರಾದ್‌(ಬಿ) ತಾಲ್ಲೂಕುಗಳನ್ನು ಬಲಪಡಿಸಲು ಮತ್ತು ಅನುಷ್ಠಾನಗೊಳಿಸಲು ಪ್ರತಿ ತಾಲ್ಲೂಕಿಗೆ ಒಬ್ಬರಂತೆ ಗುತ್ತಿಗೆ ಆಧಾರದ ಮೇಲೆ ಆಸ್ಪೈರೇಷನ್‌ ಬ್ಲಾಕ್ ಫೆಲೊಗಳ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ, ಸಾಮಾಜಿಕ ಜಾಲತಾಣಗಳ ಬಳಕೆ ತಿಳಿದಿರಬೇಕು. ಪ್ರಾಜೆಕ್ಟ್ ಮ್ಯಾನೇಜೆಮೆಂಟ್ ಕೌಶಲಗಳನ್ನು ಹೊಂದಿರಬೇಕು. ಇಂಗ್ಲಿಷ ಮತ್ತು ಕನ್ನಡ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ  ಹೊಂದಿರಬೇಕು. ಹುದ್ದೆಗೆ ಮಾಸಿಕವಾಗಿ ₹ 55,000 ವೇತನದೊಂದಿಗೆ ನೇಮಕ ಮಾಡಿಕೊಳ್ಳಲಾಗುವುದು. ಅಸಕ್ತರು ತಮ್ಮ ಸ್ವವಿವರಗಳೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ, ಬೀದರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ರಜಿಸ್ಟರ್‌ ಪೋಸ್ಟ್ ಮೂಲಕ ಫೆಬ್ರವರಿ 8ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT