ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನ ಪರಿಷತ್‌ ಸದಸ್ಯ– ಶಾಸಕರ ಬೆಂಬಲಿಗರ ನಡುವೆ ವಾಗ್ವಾದ

Published : 9 ಆಗಸ್ಟ್ 2024, 16:01 IST
Last Updated : 9 ಆಗಸ್ಟ್ 2024, 16:01 IST
ಫಾಲೋ ಮಾಡಿ
Comments

ಹುಮನಾಬಾದ್‌: ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಹೊರವಲಯದ ಸೀಮಿ ನಾಗನಾಥ ದೇವಸ್ಥಾನದಲ್ಲಿ ಶುಕ್ರವಾರ ನಾಗರ ಪಂಚಮಿ ಹಬ್ಬದ ನಿಮಿತ್ತ ನಡೆದ ಪಲ್ಲಕ್ಕಿ ಉತ್ಸವ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಹಾಗೂ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರ ಬೆಂಬಲಿಗರೊಬ್ಬರ ನಡುವೆ ಕ್ಲುಲ್ಲಕ ಕಾರಣಕ್ಕೆ ನಡೆದ ವಾಗ್ವಾದವು ಪಟ್ಟಣದಲ್ಲಿ ಕೆಲಕಾಲ ಪ್ರಕ್ಸುಬ್ದ ವಾತಾವರಣಕ್ಕೆ ಕಾರಣವಾಯಿತು.

ಪಲ್ಲಕ್ಕಿ ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಡಾ.ಚಂದ್ರಶೇಖರ ಪಾಟೀಲ ಅವರು ತಮಗೆ ಧಮಕಿ ಹಾಕಿದ್ದಾರೆ ಎಂದು ಆರೋಪಿಸಿ ಸಿದ್ದಲಿಂಗಪ್ಪ ಪಾಟೀಲ ಅವರ ಬೆಂಬಲಿಗ ಮಹೇಶ್ ಪ್ರಭಾ ಅವರು ಹಳ್ಳಿಖೇಡ (ಬಿ) ಪೊಲೀಸ್ ಠಾಣೆಗೆ ತೆರಳಿದ್ದರು. ಈ ವಿಷಯ ಎಲ್ಲೆಡೆ ತಿಳಿಯುತ್ತಿದ್ದಂತೆ ಎರಡೂ ಪಕ್ಷಗಳ ಕಾರ್ಯಕರ್ತರು  ಹಳ್ಳಿಖೇಡ (ಬಿ) ಪೊಲೀಸ್ ಠಾಣೆ ಎದುರಿಗೆ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ಉಂಟಾಗಿತ್ತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಚಂದ್ರಶೇಖರ ಪಾಟೀಲ, ವೀರಣ್ಣಾ ಪಾಟೀಲ, ಧನರಾಜ್ ತಾಳಂಪಳ್ಳಿ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಎದುರಿಗೆ ಜಮಾಯಿಸಿದ್ದರು. ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದ ಭೀಮರಾವ ಪಾಟೀಲ ಅವರು ದೊಡ್ಡ ಮಟ್ಟದಲ್ಲಿ ಪಲ್ಲಕ್ಕಿ ಉತ್ಸವ ನಡೆಯುತ್ತಿದೆ. ಇಂತಹ ಸಮಯದಲ್ಲಿ ಕೆಲ ಘಟನೆಗಳು ಸಾಮಾನ್ಯವಾಗಿ ಜರುಗುತ್ತವೆ. ಜನರ ನೂಕುನುಗ್ಗಲು ನಡೆಯುತ್ತದೆ. ಅದಕ್ಕೆ ಬೇರೆ ಅರ್ಥಗಳು ಕಲ್ಪಿಸುವುದು ಬೇಡ ಎಂದು ಮನವರಿಕೆ ಮಾಡಿದರು. ಈ ಕುರಿತು ಯಾರು ಕೂಡ ದೂರು ನೀಡದ ಕಾರಣ ಯಾವುದೇ ಪ್ರಕರಣ ದಾಖಲಾಗಿಲ್ಲ.

ಸಂಭ್ರದ ಪಲ್ಲಕ್ಕಿ ಉತ್ಸವ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಲಾಯಿತು. ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಶ್ರೀಸೀಮಿ ನಾಗನಾಥ ದೇವಸ್ಥಾನದಲ್ಲಿ ಅಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆ ನಡೆದವು. ಬೆಳಿಗ್ಗೆಯಿಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಮಹಿಳೆಯರು, ಮಕ್ಕಳು ಹೊಸ ಉಡುಪು ಧರಿಸಿ ಪೂಜೆ ಸಲ್ಲಿಸಿ ಹಾಲು ಎರೆದರು.

ಹೊರ ರಾಜ್ಯಗಳ ಭಕ್ತರು: ನಾಗರ ಪಂಚಮಿ ದಿನ ಪ್ರತಿ ವರ್ಷ ರಾಜ್ಯ ಸೇರಿದಂತೆ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ , ತೆಲಂಗಾಣದ ರಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನ ಪಡೆದರು. ನಾಗಮಾಲಾ ಧಾರಿಗಳಿಂದ ವಿಶೇಷ ಪೂಜೆ, ಭಜನೆ ಕಾರ್ಯಕ್ರಮ ಸಹ ನಡೆದವು. ಸ್ಥಳೀಯ ಪುಟ್ಟರಾಜ ಗವಾಯಿ ಸಂಘದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಪಲ್ಲಕ್ಕಿ ಉತ್ಸವ: ಶುಕ್ರವಾರ ಮಧ್ಯಾಹ್ನದಲ್ಲಿ ಸೀಮಿ ನಾಗನಾಥ ದೇವರ ಪಲ್ಲಕ್ಕಿ ಉತ್ಸವ ಮಾಲಾಧಾರಿಗಳಿಂದ ವೈಭವದಿಂದ ಜರುಗಿತು. ಅತ್ಯಂತ ಪುರವಂತಿಗೆ ಹಾಗೂ ವಿವಿಧ ವಾಧ್ಯಗಳ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆಯಿತು. ದೇವರ ದರ್ಶನ ಪಡೆದ ಭಕ್ತರು ಪ್ರಸಾದ ಸ್ವೀಕರಿಸಿದರು.

ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಬಿ.ಪಟ್ಟಣದ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರು
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಬಿ.ಪಟ್ಟಣದ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರು
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಸೀಮಿ ನಾಗನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ ಜರುಗಿತು
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಸೀಮಿ ನಾಗನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ ಜರುಗಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT