ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಶಿಕ್ಷಕ ವರ್ಗಾವಣೆ; ಕಣ್ಣೀರಾದ ವಿದ್ಯಾರ್ಥಿಗಳು

Published 27 ಜೂನ್ 2023, 13:51 IST
Last Updated 27 ಜೂನ್ 2023, 13:51 IST
ಅಕ್ಷರ ಗಾತ್ರ

ಖಟಕಚಿಂಚೋಳಿ (ಭಾಲ್ಕಿ): ಸಮೀಪದ ದಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಗಿಪ್ಸನ್ ನೆಲ್ಸನ್ ವರ್ಗಾವಣೆಗೊಂಡ ಕಾರಣ ವಿದ್ಯಾರ್ಥಿಗಳು ಕಣ್ಣೀರಾಕಿದ್ದಾರೆ.

ಗಿಪ್ಸನ್ ನೆಲ್ಸನ್ ಈ ಶಾಲೆಯಲ್ಲಿ 22 ವರ್ಷಗಳಿಂದ ಚಿತ್ರಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಲಖನಗಾಂವ್ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಯಾಗಿದ್ದಾರೆ.

ಮಕ್ಕಳನ್ನು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದ್ದರು. ಅವರು ಗಾಯನವನ್ನೂ ಮಾ ಡುತ್ತಿದ್ದರು. ಮಕ್ಕಳಿಗೆ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿಕೊಡುತ್ತಿದ್ದರು. ಹೀಗಾಗಿ ಸಹಜವಾಗಿಯೇ ಇವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಸದ್ಯ ವರ್ಗಾವಣೆಗೊಂಡ ಕಾರಣ ಶಿಕ್ಷಕ ಗಿಪ್ಸನ್ ನೆಲ್ಸನ್ ಕೋಟೆ ಅವರು ದಾಡಗಿ ಪ್ರೌಢಶಾಲೆಯಿಂದ ಸೋಮವಾರ ಬಿಡುಗಡೆಗೊಂಡಿದ್ದಾರೆ.

ಶಿಕ್ಷಕರು ಶಾಲೆ ಬಿಟ್ಟು ಹೋಗುತ್ತಿದ್ದಾರೆ ಎನ್ನುವ ವಿಷಯ ತಿಳಿದ ವಿದ್ಯಾರ್ಥಿಗಳು, ‘ದಯವಿಟ್ಟು ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗಬೇಡಿ ಸರ್‌’ ಎಂದು ಅಳುತ್ತಾ ತಬ್ಬಿಕೊಂಡರು. ಆಗ ಶಾಲೆಯ ಮುಖ್ಯಶಿಕ್ಷಕ ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದ್ದಾರೆ.

ಭಾವುಕರಾಗಿ ಮಾತನಾಡಿದ ಶಿಕ್ಷಕ ಗಿಪ್ಸನ್ ನೆಲ್ಸನ್ ಕೋಟೆ,‘ಸರ್ಕಾರಿ ವೃತ್ತಿಯಲ್ಲಿ ವರ್ಗಾವಣೆ ಎನ್ನುವುದು ಸಾಮಾನ್ಯ. ಸುಮಾರು 22 ವರ್ಷಗಳ ಕಾಲ ನಿಮ್ಮೆಲ್ಲರ ಸಹಕಾರದಿಂದ ಉತ್ತಮವಾಗಿ ಸೇವೆ ಸಲ್ಲಿಸಿದ್ದೇನೆ. ವರ್ಗಾವಣೆಗೊಂಡ ಈ ಸ್ಥಾನಕ್ಕೆ ಮತ್ತೆ ನನಗಿಂತಲೂ ಒಳ್ಳೆಯ ಶಿಕ್ಷಕರು ಬರುತ್ತಾರೆ. ಚಿಂತೆ ಮಾಡಬೇಡಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT