ಹುಮನಬಾದ್: ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಸಂಘಟನೆಗಳ ಜಂಟಿ ಸಮಿತಿ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಿತ್ರಾಬಾಯಿ ಜಮಾದಾರ ಮಾತನಾಡಿ,‘ಸಮಗ್ರ ಶಿಶು ಅಭಿವೃದ್ದಿ ಯೋಜನೆ, ಮಧ್ಯಾಹ್ನದ ಊಟ ಯೋಜನೆ, ರಾಷ್ಟೀಯ ಆರೋಗ್ಯ ಮಿಷನ್ ಸೇರಿದಂತೆ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಿಗೆ ಬಜೆಟ್ ಅನುದಾನ ಹಂಚಿಕೆ ಮಾಡುವುದರ ಜತೆಗೆ ಮಹತ್ವದ ಯೋಜನೆಗಳ ಕಾಯಂಗೊಳಿಸಬೇಕು’ ಎಂದರು.

ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನಗಳ ಶಿಫಾರಸ್ಸಿನಂತೆ ಯೋಜನಾ ಕಾರ್ಮಿಕರನ್ನು ಕಾಯಂ ಮಾಡಬೇಕು. ಕಾರ್ಮಿಕರಿಗೆ ಪ್ರತಿ ತಿಂಗಳು ₹ 21 ಸಾವಿರ ಕನಿಷ್ಠ ವೇತನ ಪಾವತಿಸಬೇಕು. ₹ 10 ಸಾವಿರ ಪಿಂಚಣಿ ನೀಡಿ, ಎಲ್ಲ ಕಾರ್ಮಿಕರಿಗೂ ಇಎಸ್ಐ, ಪಿಎಫ್ ನೀಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ಸೋಂಕು ತಡೆಯಲು ಮುಂಚೂಣಿ ಕೆಲಸಗಾರರಾಗಿ ತೊಡಗಿಸಿಕೊಂಡಿರುವವರು ಮೃತಪಟ್ಟರೆ ಅಂಥರಿಗೆ ₹50 ಲಕ್ಷ ವಿಮಾ ಸೌಲಭ್ಯ ನೀಡಬೇಕು. ಅವರ ಕುಟುಂಬದವರಿಗೆ ಪಿಂಚಣಿ ಮತ್ತು ಕಾಯಂ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ, ರೇಖಾ ಹಮಿಲಪುರ್, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಉಷಾ ಗುತ್ತೆದಾರ, ಕೋಶಾಧ್ಯಕ್ಷೆ ವಿಜಯಲಕ್ಷ್ಮಿ ಕಲ್ಲೂರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಮಾಳಗೆ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.