ಮಂಗಳವಾರ, ಸೆಪ್ಟೆಂಬರ್ 29, 2020
22 °C

ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಬಾದ್: ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಸಂಘಟನೆಗಳ ಜಂಟಿ ಸಮಿತಿ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಿತ್ರಾಬಾಯಿ ಜಮಾದಾರ ಮಾತನಾಡಿ,‘ಸಮಗ್ರ ಶಿಶು ಅಭಿವೃದ್ದಿ ಯೋಜನೆ, ಮಧ್ಯಾಹ್ನದ ಊಟ ಯೋಜನೆ, ರಾಷ್ಟೀಯ ಆರೋಗ್ಯ ಮಿಷನ್ ಸೇರಿದಂತೆ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಿಗೆ ಬಜೆಟ್ ಅನುದಾನ ಹಂಚಿಕೆ ಮಾಡುವುದರ ಜತೆಗೆ ಮಹತ್ವದ ಯೋಜನೆಗಳ ಕಾಯಂಗೊಳಿಸಬೇಕು’ ಎಂದರು.

ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನಗಳ ಶಿಫಾರಸ್ಸಿನಂತೆ ಯೋಜನಾ ಕಾರ್ಮಿಕರನ್ನು ಕಾಯಂ ಮಾಡಬೇಕು. ಕಾರ್ಮಿಕರಿಗೆ ಪ್ರತಿ ತಿಂಗಳು ₹ 21 ಸಾವಿರ ಕನಿಷ್ಠ ವೇತನ ಪಾವತಿಸಬೇಕು. ₹ 10 ಸಾವಿರ ಪಿಂಚಣಿ ನೀಡಿ, ಎಲ್ಲ ಕಾರ್ಮಿಕರಿಗೂ ಇಎಸ್‍ಐ, ಪಿಎಫ್‌ ನೀಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ಸೋಂಕು ತಡೆಯಲು ಮುಂಚೂಣಿ ಕೆಲಸಗಾರರಾಗಿ ತೊಡಗಿಸಿಕೊಂಡಿರುವವರು ಮೃತಪಟ್ಟರೆ ಅಂಥರಿಗೆ ₹50 ಲಕ್ಷ ವಿಮಾ ಸೌಲಭ್ಯ ನೀಡಬೇಕು. ಅವರ ಕುಟುಂಬದವರಿಗೆ ಪಿಂಚಣಿ ಮತ್ತು ಕಾಯಂ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ, ರೇಖಾ ಹಮಿಲಪುರ್, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಉಷಾ ಗುತ್ತೆದಾರ, ಕೋಶಾಧ್ಯಕ್ಷೆ ವಿಜಯಲಕ್ಷ್ಮಿ ಕಲ್ಲೂರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಮಾಳಗೆ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು