ಭಾನುವಾರ, ಸೆಪ್ಟೆಂಬರ್ 19, 2021
30 °C
ಬೀದರ್ ಜಿಲ್ಲಾ ವಕೀಲರ ಸಂಘ

ಬೀದರ್ ಜಿಲ್ಲಾ ವಕೀಲರ ಸಂಘ: ಮಾನೂರೆ ಅಧ್ಯಕ್ಷ, ಪಾಟೀಲ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಮಾನೂರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಶರಣಪ್ಪ(ಪುಟ್ಟು) ಪಾಟೀಲ ಆಯ್ಕೆಯಾಗಿದ್ದಾರೆ.

ಇಲ್ಲಿಯ ವಕೀಲರ ಸಂಘದ ಕಚೇರಿಯಲ್ಲಿ ಸಂಘದ ಐದು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪ್ರತಿ ಸ್ಥಾನಕ್ಕೆ ಒಬ್ಬೊಬ್ಬರೇ ಅಂತಿಮ ಕಣದಲ್ಲಿ ಉಳಿದ ಪ್ರಯುಕ್ತ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ರವೀಂದ್ರ ವಾಡೆ, ಕಾರ್ಯದರ್ಶಿಯಾಗಿ ಕೃಷ್ಣ ಬಿರಾದಾರ ಮತ್ತು ಖಜಾಂಚಿಯಾಗಿ ಅಬ್ದುಲ್ ಹಫೀಜ್ ಆಯ್ಕೆಯಾದರು.

ಶಿವಶರಣಪ್ಪ ಪಾಟೀಲ ಮೂರನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಗುರುರಾಜ ಚಿಮಕೋಡೆ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ನೂತನ ಪದಾಧಿಕಾರಿಗಳಿಗೆ ವಕೀಲರು ಪುಷ್ಪಗುಚ್ಛ ನೀಡಿ ಶುಭ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.