ಕಸಾಪ ಚುನಾವಣೆಗೆ ಅತಿವಾಳೆ ಸ್ಪರ್ಧೆ

ಬೀದರ್: ಮೇ 9 ರಂದು ನಡೆಯಲಿರುವ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಗೌರವ ಕಾರ್ಯದರ್ಶಿ ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ.
ಹಿರಿಯರು, ಸ್ನೇಹಿತರು, ಕನ್ನಡ ಕಾರ್ಯಕರ್ತರು ಹಾಗೂ ಅಜೀವ ಸದಸ್ಯರ ಒತ್ತಾಯದ ಕಾರಣ ಸ್ಪರ್ಧಾ ಕಣಕ್ಕೆ ಇಳಿಯಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.
ಕರುನಾಡು ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆಯ ಗೌರವಾಧ್ಯಕ್ಷನಾಗಿ, ಸಾಹಿತಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಶಿಕ್ಷಕನಾಗಿ 20 ವರ್ಷಗಳಿಂದ ಕನ್ನಡ ನಾಡು, ನುಡಿಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮ 10 ಅಂಶಗಳ ಚುನಾವಣಾ ಪ್ರಣಾಳಿಕೆಯನ್ನೂ ಅವರು ಬಿಡುಗಡೆ ಮಾಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.