ಬುಧವಾರ, ಆಗಸ್ಟ್ 4, 2021
26 °C

ಬೀದರ್: ರಾಜಗೃಹದ ಮೇಲೆ ದಾಳಿಯನ್ನು ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮುಂಬೈನ ಡಾ. ಬಿ.ಆರ್. ಅಂಬೇಡ್ಕರ್ ಅವರ ನಿವಾಸ ರಾಜಗೃಹದ ಮೇಲಿನ ದಾಳಿ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

ಸಮಿತಿಯ ಕಾರ್ಯಕರ್ತರು ಸಮಿತಿಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ದಾಳಿ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ರಾಜಗೃಹ ಹಾಗೂ ಡಾ. ಅಂಬೇಡ್ಕರ್ ಅವರ ಕುಟುಂಬ ವರ್ಗದವರಿಗೆ ಝಡ್ ಶ್ರೇಣಿಯ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಹೆಗಡೆ, ಉಪಾಧ್ಯಕ್ಷ ರಾಜು ಹಳ್ಳಿಖೇಡಕರ್, ಪ್ರಧಾನ ಕಾರ್ಯದರ್ಶಿ ಶಿವರಾಜ ದೊಡ್ಡಿ, ತಾಲ್ಲೂಕು ಅಧ್ಯಕ್ಷರಾದ ದತ್ತಾತ್ರಿ ಜ್ಯೋತಿ, ರವಿ ನಿಜಾಂಪುರೆ, ದೇವಪ್ಪ, ವಿಜಯಕುಮಾರ ವಾಘಮಾರೆ, ವಿಜಯಕುಮಾರ ಹಿಪ್ಪಳಗಾಂವ, ಡೇವಿಡ್ ವಾಡೇಕರ್, ಶಿವಣ್ಣ ಹಿಪ್ಪಳಗಾಂವ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು