ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಸದಸ್ಯರಿಂದ ಕೌಡ್ಯಾಳ ಮೇಲೆ ಹಲ್ಲೆ: ಆರೋಪ

Last Updated 18 ಮೇ 2019, 14:49 IST
ಅಕ್ಷರ ಗಾತ್ರ

ಬೀದರ್: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ಕಾಂಗ್ರೆಸ್ ಮುಖಂಡ ವಿಜಯಕುಮಾರ ಕೌಡ್ಯಾಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾದಿಗ ದಂಡೋರಾ ಹೋರಾಟ ಸಮಿತಿ ಆರೋಪಿಸಿದೆ.

ಔರಾದ್ ಪಟ್ಟಣ ಪಂಚಾಯಿತಿ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಮೇ 14 ರಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾದಿಗ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ವಿಜಯಕುಮಾರ ಕೌಡ್ಯಾಳ ದೂರು ನೀಡಿದ್ದರು. ಇದನ್ನು ಸಹಿಸದೆ ವಿಜಯಸಿಂಗ್ ಅವರು ಕಪಾಳ ಮೋಕ್ಷ ಮಾಡಿದ್ದು, ಕೌಡ್ಯಾಳ ಮೂರ್ಛೆ ಹೋಗಿದ್ದರು ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಹೆಗಡೆ ಆರೋಪಿಸಿದ್ದಾರೆ.

ಘಟನೆ ಸಂಬಂಧ ಮೇ 17 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಆದರೆ, ದೂರು ದಾಖಲಾಗಿಲ್ಲ ಎಂದು ಆಪಾದಿಸಿದ್ದಾರೆ.

ಕೌಡ್ಯಾಳ ಮೇಲಿನ ಹಲ್ಲೆಯನ್ನು ಖಂಡಿಸಿ ಮೇ 20 ರಂದು ಬೆಳಿಗ್ಗೆ 11ಕ್ಕೆ ಮಾದಿಗ ದಂಡೋರಾ ಹೋರಾಟ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಫರ್ನಾಂಡೀಸ್ ಹಿಪ್ಪಳಗಾಂವ್ ನೇತೃತ್ವದಲ್ಲಿ ಬೀದರ್‌ನ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುವುದು. ವಿಜಯಸಿಂಗ್ ಅವರ ಪ್ರತಿಕೃತಿ ದಹಿಸಲಾಗುವುದು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಗೃಹ ಸಚಿವರಿಗೆ ಮನವಿ ಪತ್ರ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT