ಬಸವಕಲ್ಯಾಣ: ತಾಲ್ಲೂಕಿನ ಕೊಹಿನೂರನಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿನ ಎಸ್.ಬಿ.ಐ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಭಾನುವಾರ ರಾತ್ರಿ ನುಗ್ಗಿದ ಕಳ್ಳನೊಬ್ಬ ಯಂತ್ರ ಒಡೆದು ಹಣ ಕಳ್ಳತನಕ್ಕೆ ಯತ್ನ ನಡೆಸಿದ್ದಾನೆ.
ಕಳ್ಳ ಒಳಗೆ ನುಗ್ಗಿ ಸಿಸಿ ಕ್ಯಾಮೆರಾ ಒಡೆದಿದ್ದಾನಲ್ಲದೆ, ನಂತರ ಯಂತ್ರ ಒಡೆದು ಹಣ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಅದು ಸಾಧ್ಯವಾಗಿಲ್ಲ. ನಂತರ ಬೆಳಿಗ್ಗೆ ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲಿಸಿದಾಗ ಎಲ್ಲ ಹಣ ಹಾಗೆಯೇ ಇರುವುದು ಗೊತ್ತಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ರಘುವೀರಸಿಂಗ್ ಠಾಕೂರ, ಸಬ್ ಇನ್‌ಸ್ಪೆಕ್ಟರ್ ಜಯಶ್ರೀ ಹೂಡಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳ ತರಿಸಿ ಪರಿಶೀಲಿಸಲಾಗಿದೆ. ಬೆರಳಚ್ಚು ಕೂಡ ಪಡೆಯಲಾಗಿದೆ. ಕಳ್ಳನು ಕೇಂದ್ರಕ್ಕೆ ಪ್ರವೇಶಿಸಿದಾಗಿನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದರಿಂದ ಅದರ ಆಧಾರದ ಮೇಲೆ ಆತನ ಹುಡುಕಾಟ ನಡೆದಿದೆ. ಈ ಬಗ್ಗೆ ಮಂಠಾಳ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.