ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ ಮೇತ್ರೆ ಮಾತನಾಡಿ, ಆಸ್ಪತ್ರೆಯಲ್ಲಿ ಕೆಲ ವೈದ್ಯರು ಇಲ್ಲದೇ ಸಮಸ್ಯೆ ಉಂಟಾಗಿದೆ. ಮತ್ತೆ ಕೆಲವು ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ನೂರಾರು ರೋಗಿಗಳು ಪರದಾಡುವಂತಾಗಿದೆ. ಗಡಿ ಭಾಗದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸೌಲಭ್ಯಗಳು ಸಿಗದೇ ಇರುವುದರಿಂದ ರೋಗಿಗಳು ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗಳು ಹಾಗೂ ಬೀದರ್, ಕಲಬುರಗಿ ಆಸ್ಪತ್ರೆಗಳಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಆದಷ್ಟು ಬೇಗ ಸಿಬ್ಬಂದಿ ಕೊರತೆ ನಿಭಾಯಿಸಬೇಕು. ಅಲ್ಪ ಸ್ವಲ್ಪ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.