ಔರಾದ್: ತಾಲ್ಲೂಕಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಮಾನವ ಮಾತ್ರವಲ್ಲದೆ ಪಶು–ಪಕ್ಷಿಗಳ ಬದುಕು ಕೂಡ ಸಂಕಷ್ಟಕ್ಕೆ ಸಿಲುಕಿದೆ. ಕುಡಿಯುವ ನೀರಿನ ಕೊರತೆಯಿಂದ ಮೂಕ ಪ್ರಾಣಿಗಳು ನರಳುತ್ತಿದ್ದು, ಗ್ರಾಮೀಣ ಭಾಗದಲ್ಲಿ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಶಿಘ್ರವೇ ಪಶು–ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕೆರೆಗಳು, ಬಾವಿಗಳು ಸಂಪೂರ್ಣವಾಗಿ ಬತ್ತಿಹೋಗಿರುವ ಪರಿಣಾಮ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತಿವೆ. ಹಲವೆಡೆ ಜಾನುವಾರುಗಳಿಗೆ ಸಹ ನೀರು ಸಿಗದೆ ತೀವ್ರ ತೊಂದರೆ ಉಂಟಾಗಿದೆ. ಜನರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ.

ಇತ್ತೀಚೆಗೆ ತೆಲಂಗಾಣ ಗಡಿ ಸಮೀಪದ ವನಮಾರಪಳ್ಳಿ ಗ್ರಾಮದಲ್ಲಿ ಗುಬ್ಬಿಗಳು ಹಾಗೂ ಕಾಗೆಗಳು ನೀರಿನ ಕೊರತೆಯಿಂದ ಸತ್ತಿರುವ ಘಟನೆ ಗಮನ ಸೆಳೆದಿದೆ. ಇದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

‘ಪಶು–ಪಕ್ಷಿಗಳಿಗೆ ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮಗಳಲ್ಲಿ ತಾತ್ಕಾಲಿಕವಾಗಿ ನೀರಿನ ಪಾತ್ರೆಗಳನ್ನು ಇಡುವುದು, ಕೆರೆ–ಕೊಳಗಳನ್ನು ಪುನರುಜ್ಜೀವನಗೊಳಿಸುವುದು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತಹ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಪ್ರಾಣಿ ಪ್ರೇಮಿ ರಿಯಾಜ್ ಪಾಶಾ ಕೊಳ್ಳೂರ ಆಗ್ರಹಿಸಿದ್ದಾರೆ.

‘ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮಾನವೀಯ ದೃಷ್ಟಿಯಿಂದ ಸಮಸ್ಯೆ ಪರಿಹರಿಸಬೇಕು. ಬಿಸಿಲಿನ ತೀವ್ರತೆ ಇನ್ನೂ ಹೆಚ್ಚುವ ಸಾಧ್ಯತೆ ಇರುವುದರಿಂದ, ಈಗಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪಶು–ಪಕ್ಷಿಗಳ ಸಾವಿನ ಸಂಖ್ಯೆ ಹೆಚ್ಚುವ ಭೀತಿ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-127809594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.