ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರೇಶ್ವರರ ಹೆಸರಿನಲ್ಲಿ ಚವಾಣ್ ಪ್ರಮಾಣ ವಚನ

Published 24 ಮೇ 2023, 16:23 IST
Last Updated 24 ಮೇ 2023, 16:23 IST
ಅಕ್ಷರ ಗಾತ್ರ

ಔರಾದ್: ಇಲ್ಲಿಯ ಮೀಸಲು ಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ಪ್ರಭು ಚವಾಣ್ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹಂಗಾಮಿ ಸಭಾಪತಿ ಆರ್.ವಿ.ದೇಶಪಾಂಡೆ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.
ಚವಾಣ್ ಅವರು ಗೋ ಮಾತೆ, ಧರ್ಮಗುರು ಸೇವಾಲಾಲ್ ಹಾಗೂ ಔರಾದ್ ಪಟ್ಟಣದ ಆರಾಧ್ಯ ದೈವ ಅಮರೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

‘ಔರಾದ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಜನ ನನ್ನ ಮೇಲೆ ವಿಶ್ವಾಸವಿಟ್ಟು ನಾಲ್ಕನೇ ಬಾರಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರ ವಿಶ್ವಾಸಕ್ಕೆ ಚ್ಯುತಿ ಬರದ ಹಾಗೆ ಕೆಲಸ ಮಾಡುತ್ತೇನೆ’ ಎಂದು ಪ್ರಮಾಣ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT