ಔರಾದ್: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಭಾವನೆಯೊಂದಿಗೆ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪಿಎಸ್ಐ ರೇಣುಕಾ ಭಾಲೇಕರ್ ಹೇಳಿದರು.

ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಮುಖಂಡ ಮೌಲಾನಾ ಚಾಂದ್ ಪಾಷಾ ಮಾತನಾಡಿ, ‘ಹಬ್ಬ ಹರಿದಿನಗಳಲ್ಲಿ ಹಿಂದೂ-ಮುಸ್ಲಿಂ ಎನ್ನದೆ ಎಲ್ಲರೂ ಸಹೋದರತ್ವದ ಭಾವದಿಂದ ಹಬ್ಬಗಳನ್ನು ಆಚರಿಸಬೇಕು. ಪರಸ್ಪರ ಕಷ್ಟ-ಸುಖಗಳಲ್ಲಿ ಭಾಗಿಯಾಗುವುದರ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು’ ಎಂದರು.

ಬೋರಗಿ ಗ್ರಾಮದ ಮುಖಂಡ ಆಯುಬ್ ಪಟೇಲ್ ಮಾತನಾಡಿ, ‘ಅಹಿತಕರ ಘಟನೆಗಳಿಗೆ ಯಾರೂ ಆಸ್ಪದ ನೀಡಬಾರದು. ಪ್ರತಿಯೊಂದು ಗ್ರಾಮದಲ್ಲಿಯೂ ಎಲ್ಲರೂ ಒಗ್ಗಟ್ಟಿನಿಂದ ಹಬ್ಬ ಆಚರಿಸಿ, ಕಾನೂನಿನ ಪರಿಪಾಲನೆಯೊಂದಿಗೆ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ನೆರವೇರಿಸಬೇಕು’ ಎಂದರು.

ಸಭೆಯಲ್ಲಿ ಎಎಸ್ಐ ರವೀಂದ್ರ, ಕಾಶಿನಾಥ ಬೆಳ್ಳೆ, ಲಕ್ಷ್ಮಣ, ದಸ್ತಗೀರ್, ನಾಮದೇವ, ಫಯಾಜ್, ಶೇಖ್ ಮಹಮದ್, ಪೊಲೀಸ್ ಪೇದೆ ಪ್ರಕಾಶ್, ಕೊಟ್ರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-734757288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.