ಔರಾದ್: ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ಗಂಭೀರ ಹಂತ ತಲುಪಿದೆ. ಬೋಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಿರುಗುಣವಾಡಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜನ-ಜಾನುವಾರುಗಳು ನೀರಿನ ಅಭಾವದಿಂದ ನಿತ್ಯ ಪರದಾಡಬೇಕಿದೆ.

ಕಿರುಗುಣವಾಡಿ ಗ್ರಾಮದಲ್ಲಿ ಅನೇಕ ಕೊಳವೆ ಬಾವಿ ಕೊರೆಸಿದರೂ ಬಹುತೇಕವು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬತ್ತಿ ಹೋಗಿವೆ. ಪ್ರಸ್ತುತ ಎರಡು ಕೊಳವೆ ಬಾವಿಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ನೀರು ಲಭ್ಯವಿದ್ದು, ಆ ನೀರಿಗಾಗಿ ಗ್ರಾಮಸ್ಥರು ಹಗಲು-ರಾತ್ರಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ. ಮಹಿಳೆಯರು ಹೊಡೆದಾಡುತ್ತಿದ್ದಾರೆ.

ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವರು ತಮ್ಮ ಹಸು-ಮೇಕೆಗಳನ್ನು ಉಳಿಸಿಕೊಳ್ಳಲು ಪಕ್ಕದ ಮಹಾರಾಷ್ಟ್ರ ರಾಜ್ಯದ ದೇಗಲೂರ ತಾಲ್ಲೂಕಿನ ಕಬಿರವಾಡಿ ಪ್ರದೇಶಕ್ಕೆ ವಲಸೆ ಹೋಗುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ರೈತರ ಮೇಲೂ ದುಷ್ಪರಿಣಾಮ ಬೀರುತ್ತಿದೆ.

‘ಕಿರಗುಣವಾಡಿ ಗ್ರಾಮದಲ್ಲಿ 50 ಬೋರ್ವೆಲ್ಗಳನ್ನು ಕೊರೆಸಿದರೂ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಪ್ಪುತ್ತಿಲ್ಲ. ಶಾಶ್ವತ ನೀರಿನ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ’ ಎಂದು ಬೋಂತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಂಡಿಬಾರಾವ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸದ್ಯ ಸಮಸ್ಯೆ ಪರಿಹಾರಕ್ಕಾಗಿ ಟ್ಯಾಂಕರ್ ವ್ಯವಸ್ಥೆ ಮಾಡಬೇಕು. ಊರಿನಿಂದ 3 ಕಿ.ಮೀ. ದೂರ ಅಣೆಕಟ್ಟು ಇದೆ. ಅಲ್ಲಿಯ ನೀರಿನ ಮೂಲ ಬಳಸಿಕೊಂಡರೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ’ ಎಂದು ಹೇಳುತ್ತಾರೆ.

‘ನಮ್ಮ ಊರಲ್ಲಿ ನೀರಿನ ಸಮಸ್ಯೆ ವರ್ಷದಿಂದ ವರ್ಷಕ್ಕೆ ಮರುಕಳಿಸುತ್ತಿರುವುದರಿಂದ ಜಿಲ್ಲಾಡಳಿತ ಮತ್ತು ಸರ್ಕಾರ ಶೀಘ್ರವೇ ಸಮಗ್ರ ಹಾಗೂ ದೀರ್ಘಕಾಲೀನ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಕಿರುಗುಣವಾಡಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-33-1362034010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.