ಔರಾದ್: ತಾಲ್ಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಲುಷಿತ ಹಾಗೂ ಹೊಲಸು ನೀರು ಬರುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಈ ನೀರು ಕುಡಿಯಲು ಯೋಗ್ಯವಿಲ್ಲ. ನೀರು ಸೇವಿಸಿದರೆ ವಾಂತಿ, ಜ್ವರ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ದಲಿತರ ಓಣಿಯ ಜನರು ಜೀವ ಭಯದಲ್ಲೇ ನೀರು ಬಳಕೆ ಮಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ತಾಲೂಕು ಪಂಚಾಯಿತಿ ಇಒ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಬಂಧಿಸಿದ ಅಧಿಕಾರಿಗಳು ದಲಿತರ ಓಣಿಯಲ್ಲಿನ ಸಮಸ್ಯೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಗ್ರಾಮದ ಅರವಿಂದ ಮಲ್ಲಿಗೆ ಆರೋಪಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಕ್ಷಣ ಸಮಸ್ಯೆ ಕಡೆ ಗಮನಹರಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1114008284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.