ಔರಾದ್: ಬೇಸಿಗೆ ತೀವ್ರತೆ ಜಾಸ್ತಿ ಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಪರಿಸ್ಥಿತಿ ನಿಭಾಯಿಸಬೇಕು ಎಂದು ಶಾಸಕ ಪ್ರಭು ಚವಾಣ್ ಸೂಚಿಸಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು,‘ನನಗೆ ಬಂದ ಮಾಹಿತಿ ಪ್ರಕಾರ ತಾಲ್ಲೂಕಿನ ಹತ್ತಾರು ಹಳ್ಳಿ ಹಾಗೂ ತಾಂಡಾಗಳಲ್ಲಿ ನೀರಿನ ಅಭಾವ ಎದುರಾಗಿದೆ. ಜನ ನಮ್ಮ ಮನೆಗೆ ಬಂದು ನಮಗೆ ನೀರು ಕುಡಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಸಮಸ್ಯೆ ಇಷ್ಟೊಂದು ಇದ್ದರೂ ನೀವು ಏನು ಮಾಡುತ್ತಿದ್ದೀರಿ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಒ, ನೀರು ಸರಬರಾಜು ವಿಭಾಗದ ಅಧಿಕಾರಿಗಳು ಕೂಡಲೇ ಎಲ್ಲ ಹಳ್ಳಿ ಹಾಗೂ ತಾಂಡಾಗಳಿಗೆ ಖುದ್ದಾಗಿ ಭೇಟಿ ನೀಡಿ ಜನರಿಗೆ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬಿಸಿಲಿತ ತಾಪಮಾನ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಬಾವಿಗಳು ಬತ್ತಿ ಹೋಗುತ್ತಿವೆ. ಇದರಿಂದ ನೀರಿನ ಕೊರತೆಯಾಗುತ್ತಿದೆ. ತಾಲ್ಲೂಕಿನ ಐದು ಕಡೆ ಈಗಾಗಲೇ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ. ಏಳು ಕಡೆ ಖಾಸಗಿ ನೀರಿನ ಮೂಲ ಬಳಸಿಕೊಳ್ಳಲಾಗುತ್ತಿದೆ ಎಂದು ಕುಡಿಯುವ ನೀರು ಸರಬರಾಜು ವಿಭಾಗದ ಎಇಇ ಮಾರುತಿ ರಾಠೋಡ್ ಹೇಳಿದರು.

ಪಶುಪಕ್ಷಿಗಳಿಗೂ ನೀರಿನ ಕೊರತೆ ಉಂಟಾಗುತ್ತಿರುವುದರಿಂದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಂದ ನಾಲಾಗಳಿಗೆ ನೀರು ಹರಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಈಗಾಗಲೇ ತೇಗಂಪೂರ, ಎಕಂಬಾ ಸೇರಿದಂತೆ ವಿವಿಧ ಕೆರೆಗಳಿಂದ ನಾಲೆಗಳಿಗೆ ನೀರು ಹರಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಎಇಇ ಸಂಗಮೇಶ ಹೇಳಿದರು.

ಸಭೆಯಲ್ಲಿ ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿ ಕುರಿತು ಸಂತೋಷ ವ್ಯಕ್ತಪಡಿಸಲಾಯಿತು. ಆದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಸಂಖ್ಯೆ ಜಾಸ್ತಿಯಾಗಬೇಕು ಎಂದು ಸಲಹೆ ನೀಡಲಾಯಿತು.

ಸಭೆಯಲ್ಲಿ ಆರೋಗ್ಯ ಕ್ಷೇತ್ರದ ಸುಧಾರಣೆ ಹಾಗೂ ಜೆಜೆಎಂ ಕಾಮಗಾರಿ ಕುರಿತು ಚರ್ಚಿಸಲಾಯಿತು.

ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಔರಾದ್ ತಹಶೀಲ್ದಾರ್ ಮಹೇಶ ಪಾಟೀಲ, ಕಮಲನಗರ ತಹಶೀಲ್ದಾರ್ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ, ಹಣಮಂತರಾವ ಕೌಟಗೆ, ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-33-943989568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.