ಔರಾದ್: ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಪದ್ಧತಿ ಮರುಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲಸಿಂಗ್ ರಾಠೋಡ್ ನಡೆಸುತ್ತಿರುವ ಉಪವಾಸ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಮುಂದುವರಿದಿದೆ. ಕೇವಲ ನೀರು ಸೇವಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಗೋಪಾಲಸಿಂಗ್ ಠಾಕೂರ್ ದೇಹದಲ್ಲಿ ನಿಶಕ್ತಿ ಕಂಡು ಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂಬತ್ತು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಅಧಿಕಾರಿಗಳು ಬಂದು ಕೇಳಿಲ್ಲ. ನನ್ನ ಬೇಡಿಕೆ ಸರ್ಕಾರದ ಗಮನಕ್ಕೆ ತಂದಿದ್ದಾರೋ ಇಲ್ಲವೋ ಎಂಬ ಅನುಮಾನವಿದೆ’ ಎಂದು ಹೇಳಿದ್ದಾರೆ.

ಗೋಪಾಲ್ಸಿಂಗ್ ಕಳೆದ ಭಾನುವಾರದಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಜಿಲ್ಲಾಧಿಕಾರಿಗಳಿಗೆ ತಮ್ಮ ಬೇಡಿಕೆ ಪತ್ರ ಕಳುಹಿಸಿದ್ದಾರೆ.

‘ಸಾರ್ವಜನಿಕ ವಿಶ್ವಾಸ ಮರುಸ್ಥಾಪಿಸಲು ತಕ್ಷಣ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳ ಬಳಕೆ ನಿಲ್ಲಿಸಬೇಕು. ಮತದಾರರ ಹಕ್ಕುಗಳನ್ನು ರಕ್ಷಿಸಲು ಮತದಾರ ಪಟ್ಟಿಯಿಂದ ಹೆಸರು ತೆಗೆಯುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿ ಧರಣಿ ಕುಳಿತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-282840815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.