ಔರಾದ್: ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎಸ್ಐಆರ್ ಹಾಗೂ ಇವಿಎಂ ರದ್ದತಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ 13ನೇ ದಿನಕ್ಕೆ ಮುಂದುವರಿದಿದೆ.

ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಮುಖಂಡ ಸುಭಾಷ ಲಾಧಾ, ರಾಹುಲ್ ಖಂದಾರೆ ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ, ‘ನಿಮ್ಮ ಜತೆ ನಾವಿದ್ದೇವೆ’ ಎಂದು ಗೋಪಾಲಸಿಂಗ್ ಅವರಿಗೆ ಧೈರ್ಯ ತುಂಬಿದ್ದಾರೆ.

ಬೀದರ್ ಜಿಲ್ಲಾ ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿಯ ಸದಸ್ಯರು ಭೇಟಿ ನೀಡಿದರು. ಸಮಿತಿ ಪ್ರಮುಖ ಅಬ್ದುಲ್ ಮನ್ನಾನ್ ಸೇಠ್ ಮಾತನಾಡಿದರು.

ಎಸ್ಐಆರ್ ಹಾಗೂ ಇವಿಎಂ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಔರಾದ್ನಲ್ಲಿ ಶೀಘ್ರದಲ್ಲೇ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.

ಜನಾಂದೋಲನ ಸಮಿತಿಯ ಓಂಪ್ರಕಾಶ್ ರೊಟ್ಟೆ, ನಿಜಾಮೊದ್ದೀನ್, ಮಕ್ಸೂದ್ ಚಂದಾ, ಬಂಟಿ ದರ್ಬಾರೆ, ಫಯಾಜ್, ಸಂತೋಷ್ ಸೂರ್ಯವಂಶಿ, ಸಂತೋಷ ಸಿಂಧೆ, ದಿನೇಶ್, ಅಮೀರೋದ್ದೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-343127549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.