ಔರಾದ್: ‘ಪಡಿತರ ಫಲಾನುಭವಿಗಳಿಗೆ ತೂಕದಲ್ಲಿ ವ್ಯತ್ಯಾಸ ಆದರೆ, ಅವರಿಂದ ಹಣ ಪಡೆದರೆ ಅಂತಹ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಲು ಶಿಫಾರಸು ಮಾಡಲಾಗುವುದು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚೆನ್ನಪ್ಪ ಉಪ್ಪೆ ಹೇಳಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತು ಪಡಿತರ ವಿತರಕರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ರೇಷನ್ ಡೀಲರ್ಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು. ಅನ್ಯಭಾಗ್ಯ ಬಡವರ ಯೋಜನೆ. ಹೀಗಾಗಿ ಈ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುವಂತೆ ಗ್ರಾಮ ಮಟ್ಟದಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು’ ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಬಾಳಾಸಾಹೇಬ್ ಪಾಟೀಲ್, ಸದಸ್ಯರಾದ ಶಿವಕುಮಾರ ಪಾಟೀಲ್, ಶಂಕರ ಪಾಟೀಲ್, ಡಿ.ಕೆ.ಚಂದು, ಸಂಜುಕುಮಾರ ಉಜನಿ, ಚೆನ್ನಬಸಪ್ಪ ಕೌಠಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಜೆಸ್ಕಾಂ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-33-963773575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.