ಔರಾದ್: ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಒಂದು ಕಡೆ ಜನ–ಜಾನುವಾರು ಕುಡಿಯುವ ನೀರಿನ ಅಭಾವದಿಂದ ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದು ಕಡೆ ರೈತರು ಬೆವರು ಸುರಿಸಿ ಬೆಳೆದಿರುವ ತರಕಾರಿ ಹಾಗೂ ಇತರೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ತಾಲ್ಲೂಕಿನಲ್ಲಿ ಸದ್ಯ 40 ರಿಂದ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಗಾಳಿಯ ತೀವ್ರತೆಗೆ ಜನರು ತತ್ತರಿಸಿದ್ದಾರೆ. ಮಧ್ಯಾಹ್ನ ವೇಳೆಯಲ್ಲಿ ರಸ್ತೆಗಳಲ್ಲಿ ಜನ ಸಂಚಾರ ಕಡಿಮೆ ಯಾಗಿದ್ದು, ಗ್ರಾಮೀಣ ಭಾಗಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ.

ಜಿಲ್ಲಾಡಳಿತವು ಬಿಸಿಲಿನ ತೀವ್ರತೆಯನ್ನು ಗಮನಿಸಿ ಅಲರ್ಟ್ ಘೋಷಣೆ ಮಾಡಿದ್ದು, ಮಧ್ಯಾಹ್ನದ ವೇಳೆ ಅನಾವಶ್ಯವಾಗಿ ಹೊರಗೆ ಓಡಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಿದೆ. ಆದರೆ ರೈತರಿಗೆ ಮಾತ್ರ ಬಿಸಿಲಿನ ತಾಪದ ನಡುವೆಯೇ ಹೊಲಗಳಿಗೆ ತೆರಳಿ ಬೆಳೆಗಳಿಗೆ ನೀರು ಹರಿಸುವ ಅನಿವಾರ್ಯ ಎದುರಾಗಿದೆ.

ಕೊಳವೆಬಾವಿ ಹಾಗೂ ಕೃಷಿ ಪಂಪ್ಸೆಟ್ಗಳ ಮೂಲಕ ನೀರಾವರಿ ಹೊಂದಿರುವ ರೈತರು ಮಧ್ಯಾಹ್ನದ ಬಿಸಿಲಿನಲ್ಲಿ ಹೊಲಗಳಲ್ಲಿ ಕೆಲಸ ಮಾಡಬೇಕಿರುವುದರಿಂದ ಆರೋಗ್ಯ ಸಮಸ್ಯೆಗಳ ಭೀತಿ ಎದುರಾಗಿದೆ. ಬಿಸಿಗಾಳಿಯಿಂದಾಗಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದು, ತಲೆ ಸುತ್ತು, ದಣಿವು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ರೈತರು ಹೇಳುತ್ತಿದ್ದಾರೆ.

ತರಕಾರಿ ಬೆಳೆಗಳು, ಮೆಕ್ಕೆಜೋಳ, ಕಬ್ಬು ಸೇರಿದಂತೆ ಅನೇಕ ಬೆಳೆಗಳಿಗೆ ನಿರಂತರ ನೀರಿನ ಅಗತ್ಯವಿದ್ದು, ಬೆಳೆ ಒಣಗುವ ಭೀತಿಯಿಂದ ರೈತರು ದಿನರಾತ್ರಿ ಶ್ರಮಿಸಿ ಬೆಳೆ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ಸಮಯ ಬದಲಿಸಲು ಆಗ್ರಹ: ರೈತರ ಪಂಪ್ಸೆಟ್ಗಳಿಗೆ ನೀಡಲಾಗುತ್ತಿರುವ ವಿದ್ಯುತ್ ಪೂರೈಕೆ ಸಮಯ ಬದಲಾವಣೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಪ್ರಸ್ತುತ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದೇ ಸಮಯದಲ್ಲಿ ಬಿಸಿಲಿನ ತಾಪ ಅತೀ ಹೆಚ್ಚು ಇರುವುದರಿಂದ ರೈತರು ಹೊಲಗಳಲ್ಲಿ ಕೆಲಸ ಮಾಡಲು ಕಷ್ಟಪಡುತ್ತಿದ್ದಾರೆ.

ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ನೀರು ಹರಿಸುವ ಸಂದರ್ಭಗಳಲ್ಲಿ ರೈತರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನದ ಬದಲು ಬೆಳಿಗ್ಗೆ 6 ಗಂಟೆಯಿಂದಲೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ ಒತ್ತಾಯಿಸಿದ್ದಾರೆ.

ಬೆಳಗಿನ ತಂಪಾದ ವಾತಾವರಣದಲ್ಲಿ ನೀರಾವರಿ ಮಾಡಿದರೆ ರೈತರಿಗೆ ಅನುಕೂಲವಾಗುವುದರ ಜೊತೆಗೆ ಬೆಳೆಗಳಿಗೂ ಉತ್ತಮ ಪರಿಣಾಮ ಬೀರುತ್ತದೆ. ಈ ಕುರಿತು ವಿದ್ಯುತ್ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-33-1105905255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.