ಔರಾದ್: ತಾಲ್ಲೂಕಿನ ಜಮಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಜನ ಕೊಡ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿದ್ದ ಎರಡು ಕೊಳವೆ ಬಾವಿಗಳು ಸಂಪೂರ್ಣ ಬತ್ತಿಹೋಗಿದೆ. ಸುಮಾರು 900ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆಯಿಂದ ಮಹಿಳೆಯರು ಮತ್ತು ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಿರುವ ಸಂದರ್ಭದಲ್ಲಿ ನೀರಿನ ಸಮಸ್ಯೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಗ್ರಾಮದ ಸಮಸ್ಯೆ ತಿಳಿದ ತಾಲ್ಲೂಕು ಆಡಳಿತ ಶನಿವಾರ ಟ್ಯಾಂಕರ್ ಮೂಲಕ ನೀರು ಪೂರೈಸಲು ಮುಂದಾಗಿದೆ. ಆದರೆ, ಒಂದು ಟ್ಯಾಂಕರ್ ನೀರು ಮಾತ್ರ ಕಳುಹಿಸಿದ್ದರಿಂದ ಮಹಿಳೆಯರ ನಡುವೆ ನೀರಿಗಾಗಿ ಜಟಾಪಟಿ ನಡೆದಿದೆ. ನೀರಿಗಾಗಿ ಸಾಲಿನಲ್ಲಿ ನಿಂತಿದ್ದ ಮಹಿಳೆಯರ ಕಣ್ಣಲ್ಲಿ ಆತಂಕ, ಕೋಪ ಮತ್ತು ಅಸಹಾಯಕತೆ ಸ್ಪಷ್ಟವಾಗಿ ಕಾಣುತ್ತಿತ್ತು. ಒಂದು ಟ್ಯಾಂಕರ್ ನೀರು ಇಷ್ಟು ಜನರಿಗೆ ಹೇಗೆ ಸಾಕಾಗುತ್ತದೆ? ಎಂದು ಗ್ರಾಮಸ್ಥರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-704775500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.