ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಅವ್ಯವಹಾರ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಚವಾಣ್‌ ಆಗ್ರಹ

Published 11 ಜುಲೈ 2024, 15:15 IST
Last Updated 11 ಜುಲೈ 2024, 15:15 IST
ಅಕ್ಷರ ಗಾತ್ರ

ಔರಾದ್: ‘ಮೈಸೂರು ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅವ್ಯವಹಾರ ನಡೆಸಿದವರ ವಿರುದ್ಧ ಕ್ರಮ ಆಗಬೇಕು’ ಎಂದು ಶಾಸಕ ಪ್ರಭು ಚವಾಣ್‌ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಮುಡಾದಿಂದ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದವರಿಗೆ ಹಂಚಲಾಗಿದೆ. ಇದು ರಾಜ್ಯದ ಅತಿ ದೊಡ್ಡ ಮೋಸವಾಗಿದ್ದು ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಭ್ರಷ್ಟಾಚಾರ ಮಿತಿ ಮೀರಿದೆ. ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ರಾಜ್ಯದ ಖಜಾನೆ ಲೂಟಿಯಾಗಲಿದೆ. ಹೀಗಾಗಿ ಈ ಎಲ್ಲ ಅವ್ಯವಹಾರ ಸಿಬಿಐನಿಂದ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT