ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್: ಔರಾದ್ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸಲು ಸಲಹೆ

Published 23 ಡಿಸೆಂಬರ್ 2023, 14:39 IST
Last Updated 23 ಡಿಸೆಂಬರ್ 2023, 14:39 IST
ಅಕ್ಷರ ಗಾತ್ರ

ಔರಾದ್: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ವೈರಸ್‌ ಪ್ರಕರಣ ದೃಡಪಟ್ಟ ಹಿನ್ನೆಲೆ ತಾಲ್ಲೂಕಿನ ಗಡಿ ಭಾಗದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಪ್ರಭು ಚವಾಣ್ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ವೈದ್ಯರ ಸಭೆ ನಡೆಸಿ ಕೋವಿಡ್ ನಿರ್ವಹಣೆ ಬಗ್ಗೆ ಚರ್ಚೆ ನಡೆಸಿದರು.

‘ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳೊಂದಿಗೆ ತಾಲ್ಲೂಕು ಗಡಿ ಹಂಚಿಕೊಂಡಿರುವುದರಿಂದ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಗಡಿ ಭಾಗದ ಚೆಕ್‍ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಬೇಕು. ಕೋವಿಡ್ ಮಾರ್ಗಸೂಚಿಯನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ’ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ‘ತಾಲ್ಲೂಕಿನ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 60 ವರ್ಷ ಮಲ್ಪಟ್ಟವರು ಹಾಗೂ ಗರ್ಭಿಣಿಯರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗೆ ಬರುವವರಲ್ಲಿ ರೋಗ ಲಕ್ಷಣಗಳಿದ್ದರೆ ತಕ್ಷಣ ತಪಾಸಣೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಕಮಲನಗರ ತಹಶೀಲ್ದಾರ್ ಅಮಿತ ಕುಲಕರ್ಣಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ, ವೈದ್ಯಾಧಿಕಾರಿ ರಮಣ ಪೋಕಲವಾರ ಸೇರಿದಂತೆ ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT