ಔರಾದ್: ತಾಲ್ಲೂಕಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವರ್ಗಾವಣೆಗಾಗಿ ಮೇ 28ರಂದು ಬೆಂಗಳೂರಿಗೆ ತೆರಳಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸುಭಾಸ್ ಚಂದ್ರ ಭೋಸ್ ಯುವಕ ಸಂಘದ ಮುಖಂಡ ರತ್ನದೀಪ ಕಸ್ತೂರೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ನಿಯೋಗದ ಮೂಲಕ ಮನವಿ ಸಲ್ಲಿಸಲಾಗುವುದು.

ತಾಲ್ಲೂಕಿನ ವಿವಿಧ ಇಲಾಖೆಗಳ ಕೆಲ ಅಧಿಕಾರಿಗಳು ದೀರ್ಘಾವಧಿಯಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಇದರಿಂದ ಸಾರ್ವಜನಿಕರ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತಿದೆ. ಸ್ಥಳೀಯ ಮಟ್ಟ ದಲ್ಲಿ ಪ್ರಭಾವ ಬೆಳೆಸಿಕೊಂಡಿರುವುದರಿಂದ ಸಾಮಾನ್ಯ ಜನರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ನಿಯೋಗದಲ್ಲಿ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕರಾದ ಜಾನಸನ್ ಘೋಡೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿ ಬಬ್ಲು ಶಾ, ಅಹಿಂದ ಹೋರಾಟಗಾರ ರವಿ ಯರನಳ್ಳೆ, ರೋಹಿತ್ ಕಾಂಬಳೆ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-33-726083197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.