ಔರಾದ್: ಪಟ್ಟಣದಲ್ಲಿ ಹಾಳಾದ ರಸ್ತೆಗಳು, ಹೂಳು ತುಂಬಿದ ಚರಂಡಿಗಳು, ಸಮರ್ಪಕ ನೈರ್ಮಲ್ಯದ ಕೊರತೆಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.

ಸರ್ಕಾರ ಆರು ತಿಂಗಳ ಹಿಂದೆ ಔರಾದ್ ಪಟ್ಟಣ ಪಂಚಾಯಿತಿಯು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದರೂ ಕಾರ್ಯರೂಪಕ್ಕೆ ಬಂದಿಲ್ಲ. ಕನಿಷ್ಠ ಕಚೇರಿ ಮೇಲಿನ ನಾಮಫಲಕವೂ ಬದಲಾಗದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಹೊಸ ಹೊಸ ಬಡಾವಣೆಗಳು ತಲೆ ಎತ್ತುತ್ತಿವೆ. 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ 20 ವಾರ್ಡ್ಗಳಿವೆ. ಬಹುತೇಕ ಎಲ್ಲ ವಾರ್ಡ್ಗಳಲ್ಲಿ ಮೂಲ ಸೌಲಭ್ಯದ ಕೊರತೆ ಇದೆ.

ಪಟ್ಟಣದಲ್ಲಿ ಏಕೈಕ ಪ್ರಮುಖ ರಸ್ತೆ ಇದ್ದು, ವ್ಯಾಪಾರ ವಹಿವಾಟು, ಬ್ಯಾಂಕು, ಬಸ್ ನಿಲ್ದಾಣ, ಆಸ್ಪತ್ರೆಗಳು, ನ್ಯಾಯಾಲಯ ಇದೇ ರಸ್ತೆಗೆ ಹೊಂದಿಕೊಂಡಿವೆ. ಆದರೆ ಈ ರಸ್ತೆಯು ಅಲ್ಲಲ್ಲಿ ಗುಂಡಿಗಳು ಬಿದ್ದಿವೆ. ಪಾದಚಾರಿ ಮಾರ್ಗ ಅತಿಕ್ರಮಣವಾಗಿದೆ.

ಚರಂಡಿಯಲ್ಲಿ ಹೂಳು ತುಂಬಿಕೊಂಡಿದೆ. ಈಚೆಗೆ ಸುರಿದ ಮಳೆ ನೀರು ರಸ್ತೆ ಮೇಲೆ ಹರಿದಿದೆ. ನೀರು ಸುಗಮವಾಗಿ ಹರಿದು ಹೋಗದೆ ಪಕ್ಕದ ಅಂಗಡಿಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ವ್ಯಾಪಾರಿಗಳು, ಸಾರ್ವಜನಿಕರು ಪಟ್ಟಣ ಪಂಚಾಯಿತಿ ಆಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪಟ್ಟಣದ ವಿವಿಧ ಬಡಾವಣೆಗಳಲ್ಲೂ ಇಂಥದ್ದೇ ಸಮಸ್ಯೆ ಇದೆ. ಚರಂಡಿಗಳಲ್ಲಿ ಕಸದ ರಾಶಿ ಹಾಗೂ ಹೂಳು ತುಂಬಿಕೊಂಡಿದೆ. ಸಮರ್ಪಕ ಕಸ ವಿಲೇವಾರಿಯಾಗದೆ ಅನೇಕ ಕಡೆ ದುರ್ವಾಸನೆ ವ್ಯಾಪಿಸಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಸಾರ್ವಜನಿಕರಲ್ಲಿ ಕಾಡುತ್ತಿದೆ. ಮಕ್ಕಳಿಂದ ವೃದ್ಧರ ತನಕ ಜನರು ನೈರ್ಮಲ್ಯ ಸಮಸ್ಯೆಯಿಂದ ಬೇಸತ್ತಿದ್ದಾರೆ.

ಈಚೆಗೆ ನಡೆದ ಪಟ್ಟಣ ಪಂಚಾಯಿತಿ ಸಭೆಯಲ್ಲೂ ನೈರ್ಮಲ್ಯ ಹಾಗೂ ಮೂಲ ಸೌಲಭ್ಯಗಳ ಸಮಸ್ಯೆ ಕುರಿತು ತೀವ್ರ ಚರ್ಚೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತೆಯನ್ನು ಖಂಡಿಸಲಾಯಿತು. ಶಾಸಕ ಪ್ರಭು ಚವ್ಹಾಣ ಕೂಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ತಕ್ಷಣ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-1014869447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.