ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್: ಸಿ.ಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Published : 24 ಸೆಪ್ಟೆಂಬರ್ 2024, 15:58 IST
Last Updated : 24 ಸೆಪ್ಟೆಂಬರ್ 2024, 15:58 IST
ಫಾಲೋ ಮಾಡಿ
Comments

ಔರಾದ್: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ  ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ, ಯುವ ಮುಖಂಡ ಖಂಡೋಬಾ ಕಂಗಟೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೊಟೆ, ಶಿವಾಜಿರಾವ ಪಾಟೀಲ ನೇತೃತ್ವದಲ್ಲಿ ಪಟ್ಟಣದ ಎಪಿಎಂಸಿ ಕ್ರಾಸ್ ಬಳಿ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಹೈಕೋರ್ಟ್‌ ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಶಾಮೀಲಾಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ಜಾಸ್ತಿಯಾಗಿದೆ. ವಾಲ್ಮೀಕಿ ನಿಗಮದ ಹಣ ನುಂಗಿ ಹಾಕಿದ್ದಾರೆ. ಎಸ್ಸಿ, ಎಸ್ಟಿ ಜನರಿಗೆ ಸಿಗಬೇಕಾದ ಸೌಲಭ್ಯಗಳು ರಾಜಕಾರಣಿಗಳು ಕಬಳಿಸುತ್ತಿದ್ದಾರೆ. ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸಿದರು.

ಬಸವರಾಜ ಹಳ್ಳೆ, ಕೇರಬಾ ಪವಾರ್, ಸುಜಿತ ರಾಠೋಡ್, ದಯಾನಂದ ಘೂಳೆ, ಆನಂದ ದ್ಯಾಡೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT