ಔರಾದ್: ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಪಟ್ಟಣದ ರಾಮನಗರ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಬಡಾವಣೆಯಲ್ಲಿ ಕಳೆದ ಎರಡು ತಿಂಗಳಿನಿಂದ ನಲ್ಲಿ ನೀರು ಸರಿಯಾಗಿ ಬರುತ್ತಿಲ್ಲ. ಇಲ್ಲಿಯ ಜನರು ಅವಲಂಬಿಸಿದ್ದ ಒಂದು ಕೊಳವೆ ಬಾವಿಯೂ ಕಳೆದ ಎಂಟು ದಿನಗಳಿಂದ ಬತ್ತಿ ಹೋಗಿರುವುದರಿಂದ ಕುಡಿಯುವ ನೀರಿಗಾಗಿ ಜನರು ಅಲೆದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕುಡಿಯುವ ನೀರು ಕೊಡಿ, ಇಲ್ಲವಾದರೆ ವಿಷ ಕೊಡಿ ಎಂದು ಘೋಷಣೆ ಕೂಗಿದರು.

ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ರಾಮನಗರ ನಿವಾಸಿಗಳು ಕಳೆದ ಎಂಟು ದಿನಗಳಿಂದ ಕುಡಿಯುವ ನೀರಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರತ್ನದೀಪ ಕಸ್ತೂರೆ ದೂರಿದರು.

ನೀರಿನ ವ್ಯವಸ್ಥೆ ನೋಡಿಕೊಳ್ಳುವ ಜಮೀರ್ ಅವರಿಗೆ ಸಮಸ್ಯೆ ಕುರಿತು ಹಲವಾರು ಬಾರಿ ಗಮನಕ್ಕೆ ತಂದರೂ ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಹೀಗಾಗಿ ಇವರನ್ನೂ ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಂತಾಬಾಯಿ ನಾಗೂರೆ, ರಂಜನಾಬಾಯಿ, ಮಂಜುಳಾ ಲಾಧಾ, ಸೋನಿಕಾ, ಕಸ್ತೂರಾಬಾಯಿ ಬೊರೆ, ಸುನೀತಾ, ಅಶ್ವಿನಿ, ವಾಮನರಾವ್, ಆನಂದ ಸೇರಿದಂತೆ ಅನೇಕರು ಪ್ರತಿಟನೆಯಲ್ಲಿ ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-33-1735901481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.