ಔರಾದ್: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಮೇ 27ರಿಂದ ಆರಂಭವಾಗಲಿದೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.

ಮೇ 27ರಂದು ಔರಾದ್, ಎಕಂಬಾ, ಭಂಡಾರಕುಮಟಾ, 28ರಂದು ಕಮಲನಗರ, ಠಾಣಾಕುಶನೂರ ಹಾಗೂ ಸಂತಪೂರ ಮೇ 29ರಂದು ಚಿಂತಾಕಿ, ವಡಗಾಂವ ಹಾಗೂ ದಾಬಕಾ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಲಿದೆ.

ಕ್ಷೇತ್ರದಲ್ಲಿ ಹೆಚ್ಚಾಗಿ ಸೋಯಾಬೀನ್ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ರೈತರ ಅವಶ್ಯಕತೆಗೆ ಅನುಗುಣವಾಗಿ ಗುಣಮಟ್ಟದ ಬೀಜಗಳನ್ನು ಸಮರ್ಪಕ ಪ್ರಮಾಣದಲ್ಲಿ ಪೂರೈಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ . ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-1955379398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.