ಔರಾದ್: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸನ್ಮಾನ ಕಾರ್ಯಕ್ರಮ ಜು.4ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಕಮಲನಗರ, ಔರಾದ್ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಪಾಲಕರಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂವರಿಗೆ ಕ್ರಮವಾಗಿ ₹21 ಸಾವಿರ, ₹11 ಸಾವಿರ, ₹7 ಸಾವಿರ ನಗದು ಬಹುಮಾನ ನೀಡಲಾಗುವುದು. ಶೇ80 ಮೇಲೆ ಅಂಕ ಪಡೆದ ಎಲ್ಲ ವಿದ್ಯಾರ್ಥಿಗಳು ಹಾಗೂ ಪಾಲಕರು, ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ.

ಶಾಸಕ ಪ್ರಭು ಚವಾಣ್ ಜನ್ಮದಿನದ ಅಂಗವಾಗಿ ಪ್ರಭು ಎಂಟರ್ಪ್ರೈಸಿಸ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಪ್ರಭು ಚವಾಣ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.