ಶುಕ್ರವಾರ, ಜನವರಿ 27, 2023
27 °C

ಬಸವಕಲ್ಯಾಣ: ಡಾ.ಕಲ್ಯಾಣರಾವ್‌, ಯಾಳವಾರಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ನಗರದಲ್ಲಿ ಶನಿವಾರ ನಡೆದ 43ನೇ ಅನುಭವ ಮಂಟಪ ಉತ್ಸವದಲ್ಲಿ ಸಾಹಿತಿ ಡಾ.ಕಲ್ಯಾಣರಾವ್ ಪಾಟೀಲ ಅವರಿಗೆ ‘ಡಾ.ಎಂ.ಎಂ.ಕಲಬುರ್ಗಿ ಸಂಶೋಧನಾ ಪ್ರಶಸ್ತಿ’ ಹಾಗೂ ಸಾಹಿತಿ ಡಾ.ಸೋಮನಾಥ ಯಾಳವಾರ ಅವರಿಗೆ ‘ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಪ್ರಶಸ್ತಿಗಳು ಕ್ರಮವಾಗಿ ₹50 ಸಾವಿರ, ₹1 ಲಕ್ಷ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಬಸವಲಿಂಗ ಪಟ್ಟದ್ದೇವರು, ನಿಜಗುಣಾನಂದ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ಅಕ್ಕ ಅನ್ನಪೂರ್ಣ, ಆನಂದ ದೇವಪ್ಪ ಹಾಗೂ ಬಸವರಾಜ ಧನ್ನೂರ, ಗುರುಬಸವ ಪಟ್ಟದ್ದೇವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು