ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್‍ನಲ್ಲಿ ಸೈಕಲ್ ರ್‍ಯಾಲಿ

Last Updated 5 ಆಗಸ್ಟ್ 2022, 2:57 IST
ಅಕ್ಷರ ಗಾತ್ರ

ಔರಾದ್: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ಪಟ್ಟಣದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸೈಕಲ್‌ ರ್‍ಯಾಲಿ ನಡೆಯಿತು.

ಇಲ್ಲಿನ ಕನ್ನಡಾಂಬೆ ವೃತ್ತದ ಬಳಿ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಸರ್ಕಾರದ ಆದೇಶದಂತೆ ಆ.15ರವರೆಗೆ ವೈವಿದ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿ ದೇಶದ ಸ್ವಾತಂತ್ರ್ಯ ಇತಿಹಾಸ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರಬಂಧ-ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದೇ 13ರಿಂದ 15ರ ವರೆಗೆ ಪ್ರತಿ ಮನೆಯಲ್ಲೂ ತಿರಂಗಾ ಧ್ವಜ ಹಾರುವಂತೆ ನೋಡಿಕೊಳ್ಳಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು, ನೌಕರರು, ಸಾರ್ವಜನಿಕರು ಇದಕ್ಕೆ ಸಹಕಾರ ನೀಡುವಂತೆ’ ಮನವಿ ಮಾಡಿದರು.

ರ್‍ಯಾಲಿಯು ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಅಮರೇಶ್ವರ ದೇವಸ್ಥಾನ, ದೇಶಮುಖ ಗಲ್ಲಿ, ಶೆಟಕಾರ ಗಲ್ಲಿ, ಗಾಂಧಿ ಚೌಕ್ ಮೂಲಕ ಅಗ್ಗಿ ಬಸವಣ್ಣ ಬಳಿ ಸಮಾರೋಪಗೊಂಡಿತು.

ಪಪಂ ಅಧ್ಯಕ್ಷೆ ಅಂಬಿಕಾ ಪವಾರ್, ಮುಖ್ಯಾಧಿಕಾರಿ ಶಿವಕುಮಾರ ಘಾಟೆ, ಪಿಎಸ್‍ಐ ಉಪೇಂದ್ರ, ಎಂಜಿನಿಯರ್ ವೀರಶೆಟ್ಟಿ ರಾಠೋಡ, ಜಗನ್ನಾಥ ಮಜಗೆ, ಸಾಮಾಜಿಕ ಕಾರ್ಯಕರ್ತ ರತ್ನದೀಪ ಕಸ್ತೂರೆ, ಕೇರಬಾ ಪವಾರ್, ಹಣಮಂತ ನವಾಡೆ, ಶಾಲಾ ಕಾಲೇಜು ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT