ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲನಗರ: 1 ಕಿ.ಮೀ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

Last Updated 14 ಆಗಸ್ಟ್ 2022, 3:13 IST
ಅಕ್ಷರ ಗಾತ್ರ

ಕಮಲನಗರ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಪಟ್ಟಣದಲ್ಲಿ ಶನಿವಾರ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು.

ಶನೇಶ್ವರ ಮಂದಿರದಿಂದ ಆರಂಭವಾದ ಮೆರವಣಿಗೆ ಅಲ್ಲಮಪ್ರಭು ವೃತ್ತ, ಪೊಲೀಸ್ ಠಾಣೆ, ಪ್ರವಾಸಿ ಮಂದಿರ, ಬಸವೇಶ್ವರ ವೃತ್ತ, ಗ್ರಾಮ ಪಂಚಾಯಿತಿ ಕಚೇರಿ ಮಾರ್ಗವಾಗಿ ಹಿರೇಮಠ ಸಂಸ್ಥಾನದ ಶಾಖಾಮಠದವರೆಗೆ ನಡೆಯಿತು.

ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಶನೇಶ್ವರ ಮಂದಿರದ ಎದುರು ತಹಶೀಲ್ದಾರ್ ರಮೇಶ ಪೆದ್ದೆ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ ಝುಲ್ಪೆ, ತಾ.ಪಂ. ಮಾಜಿ ಅಧ್ಯಕ್ಷ ಗಿರೀಶ ಒಡೆಯರ್, ಶ್ರೀರಂಗ ಪರಿಹಾರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಶಿವಾನಂದ ವಡ್ಡೆ, ತಾ.ಪಂ ಇಒ ಸೈಯದ್ ಫಜಲ್, ತಾ.ಪಂ ಸಹಾಯಕ ನಿರ್ದೇಶಕ ಹಣಮಂತರಾಯಿ ಕೌಟಗೆ, ಬಿಇಒ ಎಸ್.ಎಸ್.ನಗನೂರ, ಕಸಾಪ ಅಧ್ಯಕ್ಷ ಪ್ರಶಾಂತ ಮಠಪತಿ, ಬಿಆರ್‌ಪಿ ಶಶಿಕುಮಾರ ಬಿಡವೆ, ಪಿಡಿಒ ರಾಜಕುಮಾರ ತಂಬಾಕೆ, ಲೋಕೋಪಯೋಗಿ ಇಲಾಖೆ ಎಇಇ ವೀರಶೆಟ್ಟಿ ರಾಠೋಡ, ಎಇಇ ಸುಭಾಷ ದಾಲ್ಗುಂಡೆ, ಸಿಪಿಐ ರಾಮಪ್ಪ ಸಾವಳಗಿ, ಪಿಎಸ್‍ಐ ಚಂದ್ರಶೇಖರ ನಿರ್ಣೆ, ಅಪರಾಧ ವಿಭಾಗದ ಪಿಎಸ್‍ಐ ಬಸವರಾಜ ಪಾಟೀಲ ಅವರು ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT