ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬು ವಾಲಿ ಬಿಡಿಎ ನೂತನ ಅಧ್ಯಕ್ಷ

ಪಕ್ಷ ನಿಷ್ಠೆಗೆ ಒಲಿದು ಬಂದ ಮಹತ್ವದ ಹುದ್ದೆ
Last Updated 30 ನವೆಂಬರ್ 2020, 14:15 IST
ಅಕ್ಷರ ಗಾತ್ರ

ಬೀದರ್: ಬಿಜೆಪಿ ಮುಖಂಡ ಬಾಬುವಾಲಿ ಅವರನ್ನು ರಾಜ್ಯ ಸರ್ಕಾರ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಮೂರು ದಶಕಗಳ ಪಕ್ಷ ನಿಷ್ಠೆಗೆ ವಾಲಿ ಅವರಿಗೆ ಮಹತ್ವದ ಹುದ್ದೆ ಒಲಿದು ಬಂದಿದೆ. ಬಿ.ಎಸ್ಸಿ, ಬಿ.ಎಡ್(ಹಿಂದಿ) ಪದವೀಧರರಾಗಿರುವ 54 ವರ್ಷದ ಬಾಬುವಾಲಿ 1990 ರಿಂದ ಬಿಜೆಪಿಯಲ್ಲಿ ಇದ್ದಾರೆ. ಪಕ್ಷದ ಸಂಘಟನೆ ಬಲವರ್ಧನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷ, ರಾಜ್ಯ ಕಾರ್ಯಕಾರಿಣಿ ಸದಸ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ವಕ್ತಾರ, ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಘಟಕದ ಸಂಚಾಲಕ, ಸ್ಲಂ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ, ರಾಜ್ಯ ಘಟಕದ ಕಾರ್ಯಕಾರಿಣಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಅನೇಕ ಚುನಾವಣೆಗಳಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಜಿಲ್ಲೆಯ ಹಾಗೂ ರಾಜ್ಯಮಟ್ಟದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಕನ್ಯಕಾ ಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಭಾರತೀಯ ಬಸವ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ, ಬೀದರ್ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ, ಗ್ರಾಮ ಭಾರತಿ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ, ಕಾಯಕ ವಿವಿಧೋದ್ದೇಶ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ, ಜಿಲ್ಲಾ ಬರಹಗಾರರ ಸಂಘದ ಗೌರವಾಧ್ಯಕ್ಷ ಹಾಗೂ ಹೈದರಾಬಾದ್ ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಬಿಜೆಪಿಯಲ್ಲಿ ಮಾತ್ರ ಸಾಧ್ಯ: ಬಿಜೆಪಿಯಲ್ಲಿ ಮಾತ್ರ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಹುದ್ದೆ ಸಿಗಲು ಸಾಧ್ಯ ಎಂದು ಬಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಬುವಾಲಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್, ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರ ಮುಖಂಡರು ನನಗೆ ಗುರುತರವಾದ ಜವಾಬ್ದಾರಿ ನೀಡಿದ್ದಾರೆ. ಅವರ ಆಶಯಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸುವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT