ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬೂಜಿ ಆದರ್ಶ ಸರ್ವಕಾಲಕ್ಕೂ ಮಾದರಿ: ರಹೀಂ ಖಾನ್‌

ಜಿಲ್ಲೆಯ ವಿವಿಧೆಡೆ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಭಾವಚಿತ್ರಕ್ಕೆ ಪೂಜೆ, ಹಸಿರುಕ್ರಾಂತಿಯ ಹರಿಕಾರನ ಕೊಡುಗೆ ಸ್ಮರಣೆ
Last Updated 5 ಏಪ್ರಿಲ್ 2022, 16:14 IST
ಅಕ್ಷರ ಗಾತ್ರ

ಬೀದರ್‌: ‘ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರ ಆದರ್ಶ, ಚಿಂತನೆಗಳು ಎಲ್ಲ ಕಾಲಕ್ಕೂ ಮಾದರಿಯಾಗಿವೆ’ ಎಂದು ಶಾಸಕ ರಹೀಂ ಖಾನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾಬೂಜಿ ಸಾಮಾಜಿಕ ಕಳಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ಮರೆಯಲಾಗದು. ಉಪ ಪ್ರಧಾನಿಯಾಗಿದ್ದ ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು’ ಎಂದು ಹೇಳಿದರು.

‘ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಕೃಷಿ ಕ್ಷೇತ್ರ ಬಲಪಡಿಸಿದರು. ಆಹಾರದ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಿ ಹಸಿರು ಕ್ರಾಂತಿಯ ಹರಿಕಾರ ಎಂದೇ ಖ್ಯಾತಿ ಪಡೆದರು’ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ನಿವೃತ್ತ ಅಧಿಕಾರಿ ಮನೋಹರ ಮಂಡೋಳಿ ಹಾಗೂ ಚಿಂತಕ ಸುಮಂತ ಕಟ್ಟಿಮನಿ ಉಪನ್ಯಾಸ ನೀಡಿದರು.

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಖೋಬಾಳಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ, ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ್, ಮಾರುತಿ ಬೌದ್ಧೆ, ಫರ್ನಾಂಡೀಸ್‌ ಹಿಪ್ಪಳಗಾಂವ, ರಮೇಶ ಕಟ್ಟಿತೂಗಾಂವ, ರಾಮದಾಸ.ಕೆ, ರಾಜು ಕಡ್ಯಾಳ್ ಇದ್ದರು. ಚೆನ್ನಬಸವ ಹೇಡೆ ನಿರೂಪಣೆ ಮಾಡಿದರು. ದೇವಿದಾಸ ಜೋಶಿ ವಂದಿಸಿದರು.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಂಗ ಮಂದಿರದ ವರೆಗೆ ಬಾಬು ಜಗಜೀವನ ರಾಮ್ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಶಾಸಕ ರಹೀಂ ಖಾನ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದರು.

‘ಅಭಿವೃದ್ಧಿಗೆ ಕೊಡುಗೆ’

ಬಸವಕಲ್ಯಾಣ: ‘ಬಾಬು ಜಗಜೀವನ ರಾಮ್‌ ಅವರು ಹಸಿರುಕ್ರಾಂತಿಯ ಹರಿಕಾರರು. ಉಪ ಪ್ರಧಾನಿ ಹಾಗೂ ಇತರೆ ಹುದ್ದೆಗಳನ್ನು ಅಲಂಕರಿಸಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದರು’ ಎಂದು ಉಪ ವಿಭಾಗಾಧಿಕಾರಿ ರಮೇಶ ಕೋಲಾರ ತಿಳಿಸಿದ್ದಾರೆ.

ನಗರದಲ್ಲಿ ತಾಲ್ಲೂಕು ಅಡಳಿತದಿಂದ ಮಂಗಳವಾರ ಆಯೋಜಿಸಲಾಗಿದ್ದ ಬಾಬು ಜಗಜೀವನ ರಾಮ್‌ ಜಯಂತಿಯಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್ ಸಾವಿತ್ರಿ ಸಲಗರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಿಂಗರಾಜ ಅರಸ್ ಹಾಗೂ ರವೀಂದ್ರ ನಾರಾಯಣಪುರ ಮಾತನಾಡಿದರು. ಬಸವಪ್ರಭು ಸ್ವಾಮೀಜಿ, ಅಮೃತರೆಡ್ಡಿ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ಜಗಜೀವನ ರಾಮ್‌ ವೃತ್ತದಲ್ಲಿ ಭಾವಚಿತ್ರದ ಪೂಜೆ ನಡೆಯಿತು. ಶರಣೆ ಚಿತ್ರಮ್ಮತಾಯಿ, ನಗರಸಭೆ ಅಧ್ಯಕ್ಷೆ ಶಹಾಜಹಾನಾ ಬೇಗಂ, ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ, ಮುಖಂಡರಾದ ಅರ್ಜುನ ಕನಕ, ಯುವರಾಜ ಭೆಂಡೆ, ಮನೋಹರ ಮೈಸೆ, ದತ್ತು ಭೆಂಡೆ, ಅಶೋಕ ಢಗಳೆ, ರಾಮ ಗೋಡಬೋಲೆ ಮೊದಲಾದವರು ಉಪಸ್ಥಿತರಿದ್ದರು.

‘ಶೋಷಿತರ ಏಳಿಗೆಗೆ ಶ್ರಮಿಸಿದ್ದ ಬಾಬೂಜಿ’

ಭಾಲ್ಕಿ: ‘ಶೋಷಿತ ಸಮುದಾಯಗಳ ಏಳ್ಗೆಗೆ ಶ್ರಮಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ ಕೊಡುಗೆ ಅನನ್ಯ’ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ನಡೆದ ಡಾ.ಬಾಬು ಜಗಜೀವನ ರಾಮ್ ಅವರ 115ನೇಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗಜೀವನ ರಾಮ್ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೆ, ಸಮಾಜ ಸೇವಕರೂ ಆಗಿದ್ದರು. ಇವರು ನೆಹರೂ ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ಅವರು ಅಸ್ಪೃಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು. ಅವರ ಆದರ್ಶ ಎಲ್ಲರಿಗೂ ಮಾದರಿಯಾಗಿವೆ ಎಂದು ತಿಳಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ ರಾಜಕುಮಾರ್, ಸದಸ್ಯ ಅನಿಲ್ ಸುಂಟೆ, ತಹಶೀಲ್ದಾರ್ ಕೀರ್ತಿ ಚಾಲಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಸಂಗನ್ ಇದ್ದರು.

‘ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ’

ಔರಾದ್: ‘ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ’ ಎಂದು ಸಂಪನ್ಮೂಲ ಶಿಕ್ಷಕ ಸೂರ್ಯಕಾಂತ ಸಿಂಗೆ ಹೇಳಿದರು.

ತಾಲ್ಲೂಕು ಆಡಳಿತ ಮಂಗಳವಾರ ಇಲ್ಲಿ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾಬೂಜಿ ಅಪರೂಪದ ರಾಜಕಾರಣಿ. ಈ ದೇಶದ ಅನ್ನದಾತ ರೈತರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ನೀಡಿದ ಯೋಜನೆಗಳು ಮರೆಯುವಂತಿಲ್ಲ. ಹಸಿರು ಕ್ರಾಂತಿಯ ಅವರ ಪರಿಕಲ್ಪನೆ ಜಗತ್ತಿಗೆ ಮಾದರಿಯಾಗಿದೆ. ಪರಿಸರ ಉಳಿಸುವುದರ ಜತೆಗೆ ಈ ದೇಶಕ್ಕೆ ಅನ್ನ ಕೊಡುವ ರೈತರು ಉಳಿಯಬೇಕು ಎಂಬ ಸದಾಶಯ ಅವರದ್ದಾಗಿತ್ತು’ ಎಂದರು.

ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ,‘ಬಾಬು ಜಗಜೀವನ ರಾಮ್ ಅವರು ಅತ್ಯುತ್ತಮ ಸಮಾಜ ಸುಧಾರಕರು. ಸಮಾಜದ ಕೆಳಸ್ಥರದ ಜನರು ಮೇಲೆ ಬರಬೇಕು. ಈ ನಿಟ್ಟಿನಲ್ಲಿ ಅವರು ತಮ್ಮ ಜೀವನದುದ್ದಕ್ಕೂ ಪ್ರಯತ್ನಿಸಿದರು’ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಪವಾರ್, ಪ್ರಭಾರ ಮುಖ್ಯಾಧಿಕಾರಿ ಶಿವಕುಮಾರ ಘಾಟೆ, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ, ಮುಖಂಡ ರಾಮಣ್ಣ ವಡೆಯರ್, ಸುಧಾಕರ್ ಕೊಳ್ಳೂರ್, ಬಂಟಿ ದರಬಾರೆ, ಅಶೋಕ ದರಬಾರೆ, ಬಾಬುರಾವ ತಾರೆ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸುಭಾಷ ನಾಗೂರೆ, ಅಶೋಕ ಸಜ್ಜನಶೆಟ್ಟಿ, ಸುಭಾಷ, ಪ್ರೇಮಶೇಖರ ಚಾಂದೋರಿ ವಿವಿಧ ಇಲಾಖೆ ಅಧಿಕಾರಿಗಳು ಈ ವೇಳೆ ಇದ್ದರು.

ಶೋಷಿತರ ಏಳಿಗೆಗೆ ಶ್ರಮಿಸಿದ್ದ ಬಾಬೂಜಿ’

ಭಾಲ್ಕಿ: ‘ಶೋಷಿತ ಸಮುದಾಯಗಳ ಏಳ್ಗೆಗೆ ಶ್ರಮಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ ಕೊಡುಗೆ ಅನನ್ಯ’ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ನಡೆದ ಡಾ.ಬಾಬು ಜಗಜೀವನ ರಾಮ್ ಅವರ 115ನೇಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗಜೀವನ ರಾಮ್ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೆ, ಸಮಾಜ ಸೇವಕರೂ ಆಗಿದ್ದರು. ಇವರು ನೆಹರೂ ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ಅವರು ಅಸ್ಪೃಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು. ಅವರ ಆದರ್ಶ ಎಲ್ಲರಿಗೂ ಮಾದರಿಯಾಗಿವೆ ಎಂದು ತಿಳಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ ರಾಜಕುಮಾರ್, ಸದಸ್ಯ ಅನಿಲ್ ಸುಂಟೆ, ತಹಶೀಲ್ದಾರ್ ಕೀರ್ತಿ ಚಾಲಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಸಂಗನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT