ಸೋಮವಾರ, ಸೆಪ್ಟೆಂಬರ್ 20, 2021
25 °C
ಸಂವಾದ ಕಾರ್ಯಕ್ರಮದಲ್ಲಿ

ನೇಮಕಾತಿ ವಿಳಂಬ: ‘ಅಹಿಂದ’ಗೆ ಅನ್ಯಾಯ; ಮಾಜಿ ಸಚಿವ ಎಚ್‌.ಸಿ.ಮಹಾದೇವಪ್ಪ ಆರೋ‍‍ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮಾಡುವ ಮೂಲಕ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ’ ಎಂದು ಮಾಜಿ ಸಚಿವ ಎಚ್‌.ಸಿ.ಮಹಾದೇವಪ್ಪ ಆರೋಪಿಸಿದರು.

ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಜಿಲೆಲಯ ವಿವಿಧ ದಲಿತ ಸಂಘಟನೆಗಳು ಇಲ್ಲಿಯ ಕನ್ನಡ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಇವೆ. ಉದ್ಯೋಗದಲ್ಲಿ ಮೀಸಲಾತಿ ನಿಯಮಗಳ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಅನೇಕ ಜನ ವಿದ್ಯಾವಂತ ಯುವಕರು ವಯೋಮಿತಿ ಮೀರಿ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.

‘ಆಡಳಿತಾರೂಢ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಅಹಿಂದ ಸಮುದಾಯ ಹಾಗೂ ದಲಿತ ಸಂಘಟನೆಗಳು ಒಂದಾಗಿ ಈಗಿನ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯುವ ಸಂಕಲ್ಪ ಮಾಡಬೇಕು’ ಎಂದರು.

ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಮನ್ನಾನ್‌ ಸೇಠ್‌ ಅಧ್ಯಕ್ಷತೆ ವಹಿಸಿದ್ದರು. ಅನಿಲಕುಮಾರ ಬೆಲ್ದಾರ್ ಮಾತನಾಡಿದರು. ಅಮೃತರಾವ್ ಚಿಮಕೋಡೆ, ಬಸವರಾಜ ಮಾಳಗೆ, ರಮೇಶ ಡಾಕುಳಗಿ, ಪ್ರದೀಪ ಜಂಜಿರೆ, ಜಾನ್ ವೆಸ್ಲಿ ಹಾಗೂ ಸೋಮನಾಥ ಕಂದಗೂಳೆ ಇದ್ದರು.

ದಲಿತ ಸಂಘಟನೆಯ ಮುಖಂಡರಾದ ಶ್ರೀಪತರಾವ್ ದೀನೆ, ಅಂಬಾದಾಸ್ ಗಾಯಕವಾಡ, ರಾಜಕುಮಾರ ಬನ್ನೇರ್, ಶಿವಕುಮಾರ ನೀಲಿಕಟ್ಟಿ, ಎಂ.ಎಸ್. ಕಟಗಿ, ಮಹಾದೇವ ಕಾಂಬಳೆ, ವಿಠ್ಠಲದಾಸ ಪ್ಯಾಗೆ ಹಾಗೂ ಕಾಶೀನಾಥ ಚೆಲವಾ ಪಾಲ್ಗೊಂಡಿದ್ದರು. ಬಾಬುರಾವ್ ಪಾಸ್ವಾನ್ ಸ್ವಾಗತಿಸಿದರು. ಪ್ರದೀಪ ನಾಟೇಕರ್ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು