ಚಿಟಗುಪ್ಪ ( ಹುಮನಾಬಾದ್ ): ಬಗರ್ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಸಭೆ ಮುಂದಿಟ್ಟು ಚರ್ಚಿಸಿ ಸಮಿತಿ ಮೂಲಕ ಜಮೀನು ಮಂಜೂರು ಮಾಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು .

ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ ನಡೆದ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಅರ್ಹ ಫಲಾನುಭವಿಗಳಿಗೆ ಕಾನೂನು ಬದ್ಧವಾಗಿ ಭೂ ಮಂಜೂರುಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು. ಸಾಗುವಳಿ ಸಕ್ರಮೀಕರಣ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಅರ್ಹ ಸಾಗುವಳಿದಾರರಿಗೆ ಅನುಕೂಲ ಕಲ್ಪಿಸಬೇಕು. ಬಡ ಮತ್ತು ಕೂಲಿ ಕಾರ್ಮಿಕರಿಗೆ ಈ ಇದರ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ್ ಪಾಂಚಾಳ, ಸಮಿತಿ ಸದಸ್ಯರಾದ ನಂದಕುಮಾರ ಪಾಟೀಲ, ಲಕ್ಷ್ಮಣ ನಿರ್ಣಾಕರ್, ಅನುರಾಧಾ ಪಾಂಚಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.