ಸೋಮವಾರ, ಆಗಸ್ಟ್ 3, 2020
27 °C

ಶ್ರದ್ಧಾ ಭಕ್ತಿಯ ಬಕ್ರೀದ್‌ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯಾದ್ಯಂತ ಶನಿವಾರ ಈದ್‌ ಉಲ್‌ ಅದಾ (ಬಕ್ರೀದ್‌) ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕೋವಿಡ್ ಸೋಂಕು ಹರಡುವಿಕೆ ತಡೆಗೆ ಅಂತರ ಕಾಯ್ದುಕೊಂಡು ಮೂರು ಹಂತಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಹೀಗಾಗಿ ಮುಸ್ಲಿಮರು ಆಯಾ ಮಸೀದಿಗಳಲ್ಲೇ ಪ್ರಾರ್ಥನೆ ಸಲ್ಲಿಸಿದರು.

ಬೀದರ್‌ನಲ್ಲಿ ಎರಡು ಈದ್ಗಾ ಮೈದಾನಗಳಿದ್ದರೂ ಅಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಗರದ ಕೇಂದ್ರ ಬಸ್‌ ನಿಲ್ದಾಣ ಸಮೀಪದ ಈದ್ಗಾ ಮೈದಾನ ಬಳಿ ಜಿಲ್ಲಾ ಸಶಸ್ತ್ರಪಡೆಯ ಸಿಬ್ಬಂದಿಯನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿತ್ತು.

ಓಲ್ಡ್‌ಸಿಟಿಯ ಚೌಬಾರಾ ಬಳಿಯ ಜಾಮಿಯಾ ಮಸೀದಿ ಸೇರಿದಂತೆ ನಗರದ ವಿವಿಧ ಬಡಾವಣೆಗಳ ಮಸೀದಿಗಳಲ್ಲಿ ಮುಸ್ಲಿಂರು ಮಾಸ್ಕ್ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ನಂತರ ಪರಸ್ಪರ ಶುಭಾಶಯ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು