ಭಾನುವಾರ, ಮೇ 22, 2022
21 °C

ನೂತನ ರಾಮ ಮಂದಿರ ನಿರ್ಮಾಣ: ಬಲಬೀರ್ ಸಿಂಗ್ ₹ 5 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮ ಮಂದಿರಕ್ಕೆ ಇಲ್ಲಿಯ ಗುರುನಾನಕ ಝೀರಾ ಫೌಂಡೇಶನ್ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್ ₹5 ಲಕ್ಷ ದೇಣಿಗೆ ನೀಡಿದ್ದಾರೆ.

ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಹಣಮಂತರಾವ್ ಪಾಟೀಲ ಅವರಿಗೆ ದೇಣಿಗೆ ಮೊತ್ತದ ಚೆಕ್ ನೀಡಿದರು.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡುವುದು ಪವಿತ್ರ ಕೆಲಸ. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ದೇಣಿಗೆ ಕೊಡಬೇಕು ಎಂದು ಮುಖಂಡ ಪ್ರಕಾಶ ಟೊಣ್ಣೆ ಮನವಿ ಮಾಡಿದರು.

ನಿವೃತ್ತ ಪ್ರಾಚಾರ್ಯ ಎಸ್.ಬಿ. ಸಜ್ಜನಶೆಟ್ಟಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು