ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನ್ನೂರ (ಎಚ್): ಭಗವಂತ ಖೂಬಾ ಪ್ರಚಾರ

Published 27 ಏಪ್ರಿಲ್ 2024, 16:26 IST
Last Updated 27 ಏಪ್ರಿಲ್ 2024, 16:26 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಧನ್ನೂರ (ಎಚ್) ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕಾರ್ಯಗಳನ್ನು ಮಾಡಿದ್ದೇನೆ. ಇನ್ನು ಮುಂದೆಯೂ ಹೆಚ್ಚಿನ ಕಾರ್ಯಗಳನ್ನು ಮಾಡುವ ಯೋಜನೆ ರೂಪಿಸಿಕೊಂಡಿದ್ದೇನೆ. ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮತದಾರರು ನನಗೆ ಮತ ನೀಡಬೇಕು’ ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಧನ್ನೂರ, ತರನಳ್ಳಿ ಗ್ರಾಮದ ಕಾಂಗ್ರೆಸ್ ಪಕ್ಷದ ಯುವಕರಿಗೆ ಭಗವಂತ ಖೂಬಾ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ, ಮುಖಂಡರಾದ ಶ್ರೀಕಾಂತ ದಾನಿ ವೀರಶೆಟ್ಟಿ, ಪಟ್ನೆ ಪ್ರಸನ್ನ ಖಂಡ್ರೆ, ತಾಲ್ಲೂಕು ಅಧ್ಯಕ್ಷ ವೀರಣ್ಣ ಕಾರಬಾರಿ, ಕಾಶಿನಾಥ ಖಂಡ್ರೆ, ರಮೇಶ ಅರಾಳೆ , ಸುನೀಲ ಚೌಹಾಣ, ಆನಂದ ಬಿರಾದಾರ, ನಾಗಶೆಟ್ಟಿ ಮುತ್ತಂಗೆ, ಅಮೃತರಾವ್ ನಾವದಗೆ, ಈಶ್ವರ್ ಬಿರಾದಾರ ಉಪ‍ಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT