ಬುಧವಾರ, ಫೆಬ್ರವರಿ 19, 2020
30 °C
ಮೋರ್ಗಿಯಲ್ಲಿ ಪಟ್ಟದ್ದೇವರ ಮೂರ್ತಿ ಅನಾವರಣ

ಪಟ್ಟದ್ದೇವರ ಸಮಾಜಮುಖಿ ಕಾರ್ಯಗಳು ಇಂದಿಗೂ ಮಾದರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಗಡಿ ಭಾಗದಲ್ಲಿ ಡಾ.ಚನ್ನಬಸವ ಪಟ್ಟದ್ದೇವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಗಳನ್ನು ಮಾಡುವ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ‌

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣ ಖೇಡ್ ತಾಲ್ಲೂಕಿನ ಮೋರ್ಗಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಶಾಖಾ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಕಮಳೇಶ್ವರ ಮಠದ ನೂತನ ಕಟ್ಟಡ ಉದ್ಘಾಟನೆ, ಬಸವಣ್ಣನವರ, ಕಮಳೇಶ್ವರ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಪಟ್ಟದ್ದೇವರು 1936ರಲ್ಲಿ ಮೋರ್ಗಿಯಲ್ಲಿ ಆರಂಭಿಸಿದ ಶಾಂತಿವರ್ಧಕ ಶಿಕ್ಷಣ ಇಂದು ಹೆಮ್ಮರವಾಗಿ ಬೆಳೆದಿದೆ. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಬಡ ವಿದ್ಯಾರ್ಥಿಗಳಿಗೆ ವರದಾನವಾಗಿ ಪರಿಣಮಿಸಿದೆ. ಇಲ್ಲಿ ಕಲಿತ ಸಾವಿರಾರೂ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅಂತಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆ ಎನಿಸುತ್ತದೆ ಎಂದರು.

ಪಟ್ಟದ್ದೇವರು ತಮ್ಮ ಜೀವಿತಾವಧಿಯಲ್ಲಿ ಕೈಗೊಂಡ ಜನಪರ ಕಾರ್ಯಗಳಿಂದ ಸಂಸ್ಥಾನದ ಗೌರವ ಹೆಚ್ಚಾಗಿದೆ ಎಂದರು.

ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರ ವಿಚಾರ ಧಾರೆ ಮೈಗೂಡಿಸಿಕೊಂಡು ನಿಜ ಜೀವನದಲ್ಲಿ ಆಚರಣೆಗೆ ತಂದವರಲ್ಲಿ ಪಟ್ಟದ್ದೇವರು. ಅವರ ಆಶೀರ್ವಾದದಿಂದ ಮಠದ ಎಲ್ಲ ಕೆಲಸ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಗುರುಬಸವ ಪಟ್ಟದ್ದೇವರು, ಕಾವಲಗಾ ಷಣ್ಮುಖ ಶಿವಯೋಗಿ ವಿರಕ್ತ ಮಠದ ಷಣ್ಮುಖ ಸ್ವಾಮೀಜಿ, ಸಿದ್ಧರಾಮೇಶ್ವರ ಪಟ್ಟದ್ದೇವರು, ಬಸವಕಲ್ಯಾಣ ಅನುಭವ ಮಂಟಪದ ಸಚ್ಚಿದಾನಂದ ಸ್ವಾಮೀಜಿ, ಶಿವಪ್ರಸಾದ ದೇವರು, ಜಯದೇವ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಮೈತ್ರಾದೇವಿ ತಾಯಿ, ಮಹಾದೇವಮ್ಮತಾಯಿ ಸಮ್ಮುಖ ವಹಿಸಿದ್ದರು.

ನಿವೃತ್ತ ಎಂಜಿನಿಯರ್‌ ಪಿ.ಸಂಗಪ್ಪ ಬಸವ ಗುರುವಿನ ಪೂಜೆ ನೆರವೇರಿಸಿದರು. ಮಾಜಿ ಸಂಸದ ಸುರೇಶ ಶೆಟಕಾರ್, ರಾಜು ರಾಠೋಡ್, ಕೀರ್ತಿ ನಂದುಪಟೇಲ್, ಬಿ.ಅಶೋಕ, ವಿಶ್ವನಾಥಪ್ಪ ಬಿರಾದಾರ ಇದ್ದರು.

ಸುನಿಲ್ ಮಾಳಗೆ ಸ್ವಾಗತಿಸಿದರು. ಬಸವರಾಜ ಮೂಲಗೆ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು