ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 15ರಿಂದ ಬೆಂಗಳೂರು–ಬೀದರ್‌ ಮಧ್ಯೆ ನಾಲ್ಕು ಬಾರಿ ವಿಮಾನ ಸಂಚಾರ

Last Updated 25 ಮೇ 2022, 14:33 IST
ಅಕ್ಷರ ಗಾತ್ರ

ಬೀದರ್‌: ಜೂನ್‌ 15ರಿಂದ ಬೆಂಗಳೂರು– ಬೀದರ್‌ ಮಧ್ಯೆ ವಾರದಲ್ಲಿ ನಾಲ್ಕು ಬಾರಿ ವಿಮಾನ ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ನಾಗರಿಕ ವಿಮಾನ ಸಂಚಾರ ಆರಂಭಿಸಲು ಸ್ಟಾರ್ ಏರ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡಿದೆ. ಸ್ಟಾರ್ ಏರ್ ವಿಮಾನದಲ್ಲಿ 50 ಪ್ರಯಾಣಿಕರು ಕುಳಿತುಕೊಳ್ಳಬಹುದಾದ ವ್ಯವಸ್ಥೆ ಇದೆ.

ಭಾನುವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 4.10ಕ್ಕೆ ಬೀದರ್ ತಲುಪಲಿದೆ. ಸಂಜೆ 4.35ಕ್ಕೆ ಬೀದರ್‌ನಿಂದ ಹೊರಟು 5.45ಕ್ಕೆ ಬೆಂಗಳೂರು ತಲುಪಲಿದೆ ಎಂದು ಹೇಳಿದ್ದಾರೆ.

ಕೋವಿಡ್ ಕಾರಣ ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ ಪ್ರಾರಂಭಗೊಳ್ಳಲಿದೆ. ಪ್ರಯಾಣಿಕರ ಸಂಖ್ಯೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಯ ಬದಲಾವಣೆ ಜತೆಗೆ ಇನ್ನಷ್ಟು ಸೇವೆ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT