ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹ

Published : 16 ಆಗಸ್ಟ್ 2024, 15:21 IST
Last Updated : 16 ಆಗಸ್ಟ್ 2024, 15:21 IST
ಫಾಲೋ ಮಾಡಿ
Comments

ಬೀದರ್‌: ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಬ್ರಿಗೇಡ್‌ ಆಗ್ರಹಿಸಿದೆ.

ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಬ್ರಿಗೇಡ್‌ ಪ್ರಮುಖರು ನಗರದಲ್ಲಿ ಶುಕ್ರವಾರ ಹೆ್ಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ನಂತರ ಅಲ್ಲಿನ ಕೆಲ ಮತಾಂಧರು ಅಲ್ಪಸಂಖ್ಯಾತ ಹಿಂದೂಗಳ ಮನೆಗೆ ಬೆಂಕಿ ಹಚ್ಚಿ ಅವರನ್ನು ಹತ್ಯೆ ಮಾಡಿದ್ದಾರೆ. ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಹಿಂದೂಗಳಿಗೆ ಅಗತ್ಯ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದರು.

ಬ್ರಿಗೇಡ್‌ ಜಿಲ್ಲಾಧ್ಯಕ್ಷ ರವಿ ಕೊಡಗಿ, ಪ್ರಮುಖರಾದ ಸೀನು ಮಾಶೆಟ್ಟಿ, ಸಂತೋಷ ಜೆ.ಪಿ., ಸೋಮನಾಥ ಬಗದಲ್, ಲಾಲಪ್ಪ, ಸಂತೋಷ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT