ಔರಾದ್: ವಿಧಾನಸಭಾ ಚುನಾವಣೆ ಘೋಷಣೆಯಾಗಿ ಬುಧವಾರದಿಂದ ನೀತಿ ಸಂಹಿತೆ ಜಾರಿಯಾದ ಕಾರಣ ಬುಧವಾರ ಪಟ್ಟಣದ ವಿವಿಧೆಡೆ ಸರ್ಕಾರಿ ಹಾಗೂ ರಾಜಕಾರಣಿಗಳ ಬ್ಯಾನರ್‌ಗಳನ್ನು ತೆರವು ಮಾಡಲಾಯಿತು.
ಪಟ್ಟಣದ ಉದಗೀರ್ ರಸ್ತೆಯಲ್ಲಿ ಅಹಿಲ್ಯಾಬಾಯಿ ಹೋಳ್ಕರ್ ಸಮುದಾಯ ಭವನದ ಭೂಮಿಪೂಜೆ ಕಾರ್ಯಕ್ರಮದ ವೇದಿಕೆ ಸುತ್ತ ಹಾಕಲಾದ ರಾಜಕಾಣಿಗಳ ಭಾವಚಿತ್ರದ ಬ್ಯಾನರ್‌ಗಳನ್ನು ತೆರವು ಮಾಡಲಾಯಿತು.
ನೀತಿ ಸಂಹಿತೆ ಕಾರಣಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಈ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಪೊಲೀಸರು ವೇದಿಕೆ ಬಳಿ ಬಂದು ತಪಾಸಣೆ ನಡೆಸಿದರು. ಇದು ರಾಜಕೀಯ ಕಾರ್ಯಕ್ರಮ ಅಲ್ಲ ಸಮಾಜದ ಧಾರ್ಮಿಕ ಕಾರ್ಯಕ್ರಮ ಎಂದು ಸಂಘಟಕರು ಪೊಲೀಸರಿಗೆ ಮನವರಿಕೆ ಮಾಡಿದರು. ಸಮಾಜದ ಮುಖಂಡರು ಸೇರಿ ಕಾರ್ಯಕ್ರಮ ಮಾಡಿ ಮುಗಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.