ಬುಧವಾರ, ಅಕ್ಟೋಬರ್ 20, 2021
24 °C

ಬೀದರ್‌: ಜಿಲ್ಲೆಯಾದ್ಯಂತ ಬಾಪೂಗೆ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯಾದ್ಯಂತ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಾಬುರೆಡ್ಡಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಐಎಎಸ್ ಪ್ರೊಬೇಷನರಿ ಕೀರ್ತನಾ ಶ್ರೀನಿವಾಸ್ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಗಾಂಧೀಜಿ ಅವರಿಗೆ ಪ್ರಿಯವಾದ ನೆಚ್ಚಿನ ಭಜನೆಗಳ ಗಾಯನಕ್ಕೂ ಜಿಲ್ಲಾಡಳಿತದಿಂದ ಅವಕಾಶ ಕಲ್ಪಿಸಲಾಗಿತ್ತು. ಕಲಾವಿದರಾದ ರಾಜೇಂದ್ರಸಿAಗ್ ಪವಾರ್, ರಾಮುಲು ಗಾದಗಿ, ಕೃಷ್ಣಾ ಮುಖೇಡಕರ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ರಘುಪತಿ ರಾಘವ ರಾಜಾರಾಂ.. ಪತಿತ ಪಾವನ ಸೀತಾರಾಮ್.. ವೈಷ್ಣವ ಜನತೋ ತೇನೆ ಕಹಿಯೇ ಜೆ.. ಭಜನೆಗಳ ಸುಸ್ರಾವ್ಯ ಗಾಯನವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆಲಿಸಿದರು. ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟ ಕಲಾವಿದರಿಗೆ ಬಳಿಕ ಜಿಲ್ಲಾಧಿಕಾರಿ ಸನ್ಮಾನಿಸಿದರು.

ಪಶುವೈದ್ಯಕೀಯ ಮಹಾವಿದ್ಯಾಲಯ: ಪಶು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಡೀನ್ ಡಾ.ದಿಲೀಪ್‌ಕುಮಾರ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಡಾ.ಬಸವರಾಜ ಅವಟಿ, ಡಾ.ಯು.ಎಸ್.ಜಾಧವ್, ಡಾ.ಎಂ.ಡಿ.ಸೂರಣಗಿ ಇದ್ದರು.

ಡಾ.ಮಲ್ಲಿನಾಥ ಕೆ.ಸಿ. ನಿರೂಪಿಸಿದರು. ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ಸ್ನಾತಕ ಮತ್ತು ಸ್ನಾತಕೋತರ ವಿದ್ಯಾರ್ಥಿಗಳು ಇದ್ದರು.

ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಬೀದರ್: ನಗರದ ಶಿವನಗರದಲ್ಲಿ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಮಹಾತ್ಮ ಗಾಂಧಿ ಅವರು ಅಹಿಂಸಾ ಮಾರ್ಗದ ಮೂಲಕವೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದರು ಎಂದು ಅವರು ಹೇಳಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ರೋಹಿದಾಸ್ ಘೋಡೆ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಶಂಕರ ದೊಡ್ಡಿ, ಚಂದ್ರಕಾಂತ ಹಿಪ್ಪಳಗಾಂವ, ಶರಣಪ್ಪ ಬಲ್ಲೂರ, ಗೋವರ್ಧನ ರಾಠೋಡ್, ಶರಣಪ್ಪ ಶರ್ಮಾ, ಧನರಾಜ್ ಹಂಗರಗಿ, ಸಂಜಯ ಜಾಗೀರದಾರ್, ಅಬ್ದುಲ್ ಸತ್ತಾರ್, ಸುನೀಲ್ ಬಚ್ಚನ್, ಶಾಮರಾವ್ ಬಂಬಳಗಿ, ಇದ್ದರು.

ಜೆಡಿಎಸ್‌ ಕಚೇರಿ: ನಗರದ ಜೆಡಿಎಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಬೀದರ್ ಉತ್ತರ ಕ್ಷೇತ್ರತ ಅಧ್ಯಕ್ಷ ಬಸವರಾಜ ಪಾಟೀಲ ಹಾರುಗೇರಿ ಹಾಗೂ ಜಿಲ್ಲಾ ಪರಿಶಿಷ್ಟ ಘಟಕ ಅಧ್ಯಕ್ಷ ದೇವೇಂದ್ರ ಸೋನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.