ಬೀದರ್: 2024–25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಂಘದ ಜಿಲ್ಲಾ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಜೆ ಮತ ಎಣಿಕೆ ನಡೆಸಲಾಯಿತು.

ಒಟ್ಟು 476 ಮತಗಳು ಚಲಾವಣೆಯಾಗಿವೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಿವಶರಣಪ್ಪ ಪಾಟೀಲ ಅವರು 227 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ಹಣಮಂತರಾವ್ ಸಿಂದೀಕ್ 124, ಕೆ.ಎಚ್.ಪಾಟೀಲ 122 ಮತಗಳನ್ನು ಪಡೆದು ಪರಾಭವಗೊಂಡರು. ಈ ಹಿಂದೆ ನಾಲ್ಕು ಅವಧಿಗೆ ಶಿವಶರಣಪ್ಪ ಪಾಟೀಲ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ.

ಉಪಾಧ್ಯಕ್ಷರಾಗಿ ಗುಂಡುರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಂದ್ರ ಬಿರಾದಾರ, ಜಂಟಿ ಕಾರ್ಯದರ್ಶಿಯಾಗಿ ಶಿಲ್ಪಾ ಪಾಟೀಲ, ಕಾರ್ಯದರ್ಶಿಯಾಗಿ ಪ್ಯಾರು ಸಾಬ್ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.