ಭಾಲ್ಕಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿ ಒಂದು ವರ್ಷ ಪೂರೈಸಿದೆ. ಅದಕ್ಕಾಗಿ ಬಸವಾದಿ ಶರಣರ ಚಿಂತನೆಗಳನ್ನು ಜನಮನದಲ್ಲಿ ಬಿತ್ತುವ ಉದ್ದೇಶದಿಂದ ಲಿಂಗಾಯತ ಮಠಾದಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯದಾದ್ಯಂತ ಸೆ.1ರಿಂದ ಅ.5ರ ವರೆಗೆ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಲಿಂಗಾಯತ ಮಠಾದಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸೆ.1 ರಂದು ಬಸವ ಜನ್ಮಭೂಮಿಯಾದ ಬಸವನ ಬಾಗೇವಾಡಿಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಅ.5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪಗೊಳ್ಳಲಿದೆ. ಒಂದು ತಿಂಗಳ ನಡೆಯುವ ಈ ಅಭಿಯಾನದಲ್ಲಿ ನಾಡಿನ ಎಲ್ಲ ಬಸವ ತತ್ವಪರ ಪೂಜ್ಯರು, ಸಂಘಟನೆಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿಗಳ ಜತೆಗೆ ವಚನ ಸಂವಾದ, ಮಧ್ಯಾಹ್ನ 4 ಗಂಟೆಗೆ ನಗರದ ಪ್ರಮುಖ ರಸ್ತೆಯಲ್ಲಿ ಬಸವ ನಡಿಗೆ ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ವೇದಿಕೆ ಕಾರ್ಯಕ್ರಮಗಳಲ್ಲಿ ನಾಡಿನ ಖ್ಯಾತ ಸಾಹಿತ್ಯ ಸಂಶೋಧಕರಿಂದ ಉಪನ್ಯಾಸ, ಅನುಭಾವಿಗಳಿಂದ ಪ್ರವಚನ, ಪೂಜ್ಯರಿಂದ ಆಶೀರ್ವಚನ ನಡೆಯಲಿದ್ದು, ಸಾಣೇಹಳ್ಳಿಯ ಶಿವ ಸಂಚಾರ ಕಲಾ ತಂಡದಿಂದ ವಚನ ಸಂಗೀತ ಹಾಗೂ ಜಂಗಮದಡಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಈ ಅಭಿಯಾನದ ಯಶಸ್ವಿಗಾಗಿ ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಸ್ವಾಗತ ಸಮಿತಿಯನ್ನು ರಚನೆ ಮಾಡಲಾಗಿದೆ. ಎಲ್ಲ ಸಮಾಜ ಬಾಂಧವರು ಪಾಲ್ಗೊಳ್ಳುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.