ಶನಿವಾರ, ಏಪ್ರಿಲ್ 10, 2021
30 °C

ಬಸವ ಧರ್ಮ ಪೀಠ: ಇಬ್ಬರು ಸ್ವಾಮೀಜಿಗಳ ನಿರ್ಗಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿ ಹಾಗೂ ನಿಜಲಿಂಗ ಸ್ವಾಮೀಜಿ ಅವರು ಬಸವ ಧರ್ಮ ಪೀಠ ಹಾಗೂ ಅದರ ಅಂಗ ಸಂಸ್ಥೆಗಳಿಂದ ನಿರ್ಗಮಿಸಿದ್ದಾರೆ ಎಂದು ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದ್ದಾರೆ.

ಬಸವ ಧರ್ಮ ಪೀಠದಿಂದ ಜಂಗಮ ದೀಕ್ಷೆ ಪಡೆದಿದ್ದ ಬಸವಪ್ರಭು ಸ್ವಾಮೀಜಿ ಅವರಿಗೆ ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ, ಬಸವ ತತ್ವ ಪ್ರಸಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಉನ್ನತ ವ್ಯಾಸಂಗ ಹಾಗೂ ಡಾಕ್ಟರೇಟ್ ಪಡೆಯುವ ಹಂಬಲ ವ್ಯಕ್ತಪಡಿಸಿದಾಗ, ಅದಕ್ಕೂ ಅನುವು ಮಾಡಿಕೊಡಲಾಗಿತ್ತು ಎಂದು ಹೇಳಿದ್ದಾರೆ.

ಸ್ವಾಮೀಜಿ ಅವರು ಇನ್ನೂ ಉನ್ನತ ವ್ಯಾಸಂಗ ಮಾಡಬೇಕೆಂಬ ಬಯಕೆಯಿಂದ ಬಸವ ಧರ್ಮ ಪೀಠ ಹಾಗೂ ಅದರ ಅಂಗ ಸಂಸ್ಥೆಗಳಿಂದ ದೂರ ಉಳಿಯುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಸ್ವತಂತ್ರವಾಗಿ ಬೆಳೆಯಬೇಕೆಂಬ ಇಚ್ಛೆಯಿಂದ ಅರಿವು, ಆಚಾರ ಸಂಕಲ್ಪ ಯಾತ್ರೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಸಂಸ್ಥೆಯಿಂದ ಸ್ವತಃ ದೂರ ಉಳಿದಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಈ ಇಬ್ಬರು ಸ್ವಾಮೀಜಿಗಳ ಮುಂದಿನ ನಡೆಗಳು ಸ್ವತಂತ್ರವಾಗಿವೆ. ಅವುಗಳಿಗೂ ಬಸವ ಧರ್ಮ ಪೀಠ ಹಾಗೂ ಅದರ ಅಂಗ ಸಂಸ್ಥೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು