ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವಣ್ಣ ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞ: ಸಂಜೀವಕುಮಾರ ಅತಿವಾಳೆ

Published 14 ಮೇ 2024, 16:19 IST
Last Updated 14 ಮೇ 2024, 16:19 IST
ಅಕ್ಷರ ಗಾತ್ರ

ಬೀದರ್‌: ‘12ನೇ ಶತಮಾನದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು’ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ತಿಳಿಸಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಶ್ರೇಷ್ಠವಾದುದು. ಅಂತಹ ಸಾಹಿತ್ಯ, ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶತಮಾನೋತ್ಸವ ಸಂಭ್ರಮದ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಗಣನೀಯವಾದದ್ದು. ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಸಂಸ್ಥೆ ಸಾಹಿತ್ಯ ಪರಿಷತ್ತು ಎಂದು ಹೇಳಿದರು.

ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೂಡ ಕನ್ನಡ  ಅಭಿವೃದ್ಧಿಗಾಗಿ ಪರಿಷತ್ತಿನೊಂದಿಗೆ ಕೆಲಸ ಮಾಡಲು ಇಚ್ಛಿಸುತ್ತದೆ ಎಂದರು.

ಸ್ಪರ್ಧಾ ಸಂಕಲ್ಪ ಅಕಾಡೆಮಿ ಅಧ್ಯಕ್ಷ ನಾಗೇಶ ಸ್ವಾಮಿ ಮಾತನಾಡಿ, ಅನೇಕ ಸಾಹಿತಿಗಳು, ಕಲಾವಿದರು, ಹೋರಾಟಗಾರರ ಶ್ರಮದಿಂದ ಇವತ್ತು ಗಡಿ ಭಾಗದಲ್ಲಿ ಕನ್ನಡ ಉಳಿದುಕೊಂಡಿದೆ ಎಂದು ತಿಳಿಸಿದರು.

ತಾಲ್ಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ಚಿಕ್ಕಂದಿನಿಂದಲೇ ಬಸವಣ್ಣನವರ ವಚನಗಳನ್ನು ನಮ್ಮ ಹಿರಿಯರು ಹೇಳಿಕೊಡುತ್ತಿದ್ದರು. ನೂರಕ್ಕೂ ಹೆಚ್ಚು ವಚನಗಳು ನಮ್ಮ ಅಜ್ಜಿ ಬಾಯಿ ಪಾಠವಾಗಿ ಹೇಳುತ್ತಾರೆ. ವಚನ ಸಾಹಿತ್ಯ ಜನರ ಬದುಕಿಗೆ ಮಾರ್ಗದಶಿಯಾಗಿದೆ ಎಂದರು.

ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಟಿ. ಎಂ. ಮಚ್ಚೆ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ. ಎಸ್. ಮನೋಹರ, ಗೌರವ ಕಾರ್ಯದರ್ಶಿ ಪ್ರೊ. ಜಗನ್ನಾಥ ಕಮಲಾಪೂರೆ, ಸಿದ್ಧಾರೂಢ ಭಾಲ್ಕೆ, ಅಶೋಕ ದಿಡಗೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT