ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಸರಳ ಬಸವ ಜಯಂತಿ ಆಚರಣೆ

Published 4 ಮೇ 2024, 16:28 IST
Last Updated 4 ಮೇ 2024, 16:28 IST
ಅಕ್ಷರ ಗಾತ್ರ

ಬೀದರ್‌: ‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಬಸವೇಶ್ವರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲಾಡಳಿತದಿಂದ ಮೇ 10ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. 9 ಗಂಟೆಗೆ ನಗರದ ಬಸವಣ್ಣನವರ ಮೂರ್ತಿಗೆ ಪುಷ್ಪಗೌರವ ಸಲ್ಲಿಸಲಾಗುತ್ತದೆ’ ಎಂದು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, ‘ಬಸವಣ್ಣನವರ ಜಯಂತಿಯನ್ನು ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸೋಣ. ಅಂದು ಎಲ್ಲ ಸರ್ಕಾರಿ ಕಚೇರಿ ಮತ್ತು ಶಾಲಾ- ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಮುಖಂಡರಾದ ಬಸವರಾಜ ಧನ್ನೂರ, ಸುರೇಶ ಚನ್ನಶೆಟ್ಟಿ, ರಾಜೇಂದ್ರಕುಮಾರ ಗಂದಗೆ, ಶಿವಶಂಕರ್ ಟೋಕರೆ, ರಮೇಶ ಪಾಟೀಲ ಸೋಲಪುರ, ಬಾಬುವಾಲಿ, ರೇವಣಸಿದ್ದಪ್ಪ ಜಲಾದೆ, ವಿರೂಪಾಕ್ಷ ಗಾದಗಿ, ಸಂತೋಷ ಜೋಳದಾಪಕಾ ಸೇರಿದಂತೆ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT